ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಅಗ್ನಿವೀರ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಅಗ್ನಿವೀರ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

Thu, 30 Jun 2022 02:56:52  Office Staff   S O News

ಕಾರವಾರ: ಭಾರತೀಯ ವಾಯುಪಡೆಯು ಅಗ್ನಿಪಥ ಯೋಜನೆಯಡಿಯಲ್ಲಿ ಅಗ್ನಿವೀರ ವಾಯು ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈಗಾಗಲೇ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿರುತ್ತದೆ, ಜುಲೈ.24 ರಂದು ಆನ್‍ಲೈನ್ ಮೂಲಕ ಪರೀಕ್ಷೆ ನಡೆಸಲಾಗುತ್ತಿದ್ದು, ಅರ್ಹ  29 ಡಿಸೆಂಬರ್ 1999 ರಿಂದ 29 ಜೂನ  2005 ರ ನಡುವೆ ಜನಿಸಿರುವ  ಪುರುಷ ಅಭ್ಯರ್ಥಿಗಳು ಪಿ.ಯು.ಸಿ/10+2 ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ತೇರ್ಗಡೆಯಾಗಿದ್ದು. ಜುಲೈ. 5 ರೊಳಗೆ ಆನ್‍ಲೈನ್ ವೆಬ್‍ಸೈಟ್ https://agnipathvayu.cdac.in  ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಕಾರವಾರ ಯೋಜನಾ ಉದ್ಯೋಗ ವಿನಿಮಯ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.


Share: