ಚಿಕ್ಕಬಳ್ಳಾಪುರ : ಮಗಳು ಅನ್ಯ ಜಾತಿ ಯುವಕನ ಜೊತೆ ಪರಾರಿಯಾದ ಹಿನ್ನೆಲೆ ಒಂದೇ ಕುಟುಂಬದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ಧಾರೆ.
ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ಘಟನೆ ನಡೆದಿದ್ದು, 26 ವರ್ಷದ ಅರ್ಚನಾ ನಾರಾಯಣಸ್ವಾಮಿ ಎಂಬಾತನ ಜೊತೆ ಪರಾರಿಯಾಗಿದ್ದು, ಮಾನ ಮರ್ಯಾದೆಗೆ ಅಂಜಿ ತಾಯಿ ಸರೋಜಮ್ಮ, ತಂದೆ ಶ್ರೀರಾಮಪ್ಪ, ಮಗ ಮನೋಜ್ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ಧಾರೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ಧಾರೆ.