ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಆಂಧ್ರಪ್ರದೇಶದ ರಾಜ್ಯಪಾಲರಾಗಿ ಕನ್ನಡಿಗ ಅಬ್ದುಲ್ ನಝೀರ್ ಪ್ರಮಾಣ

ಆಂಧ್ರಪ್ರದೇಶದ ರಾಜ್ಯಪಾಲರಾಗಿ ಕನ್ನಡಿಗ ಅಬ್ದುಲ್ ನಝೀರ್ ಪ್ರಮಾಣ

Sat, 25 Feb 2023 17:22:58  Office Staff   Vb

ವಿಜಯವಾಡ: ಆಂಧ್ರಪ್ರದೇಶದ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ, ಕನ್ನಡಿಗ ಎಸ್. ಅಬ್ದುಲ್ ನಝೀರ್ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ರಾಜ್ಯಪಾಲರಿಗೆ ಹೈದರಾಬಾದ್ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪ್ರಮಾಣ ವಚನ ಬೋಧಿಸಿದರು.

ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್‌ ರೆಡ್ಡಿ, ಅವರ ಪತ್ನಿ ವೈ.ಎಸ್. ಭಾರತಿ ರೆಡ್ಡಿ, ಮುಖ್ಯ ಕಾರ್ಯದರ್ಶಿ ಡಾ. ಕೆ.ಎಸ್‌. ಜವಾಹರ್ ರೆಡ್ಡಿ, ಹಲವು ಹಾಲಿ ಸಚಿವರು, ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.


Share: