ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಆ. 8ರವರೆಗೆ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಸ್ತರಣೆ: ಶಶಿಕುಮಾರ್

ಆ. 8ರವರೆಗೆ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಸ್ತರಣೆ: ಶಶಿಕುಮಾರ್

Fri, 05 Aug 2022 01:02:30  Office Staff   Press Release

ಮಂಗಳೂರು: ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಲಾಗಿರುವ ನಿಷೇಧಾಜ್ಞೆಯನ್ನು (ಸೆಕ್ಷನ್ 144) ಆಗಸ್ಟ್ 8ರ ಬೆಳಗ್ಗೆ 6 ಗಂಟೆಯವರೆಗೆ ವಿಸ್ತರಿಸಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶಿಸಿದ್ದಾರೆ.

ಇದೇ ವೇಳೆ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ಮಾದರಿಯ ದ್ವಿಚಕ್ರ ವಾಹನದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯರು, ಮಹಿಳೆಯರು, 18 ವರ್ಷದೊಳಗಿನ ಮಕ್ಕಳನ್ನು ಹೊರತುಪಡಿಸಿ ಯುವಕರು ಹಾಗೂ ಪುರುಷ ಸಹ ಸವಾರರ ಓಡಾಟವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.


Share: