ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಉಡುಪಿಯಲ್ಲಿ ನಿರಂತರ ವರ್ಷಧಾರೆ‌‌ : ನಾಳೆ (ಜುಲೈ 1 ) ಜಿಲ್ಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ.

ಉಡುಪಿಯಲ್ಲಿ ನಿರಂತರ ವರ್ಷಧಾರೆ‌‌ : ನಾಳೆ (ಜುಲೈ 1 ) ಜಿಲ್ಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ.

Fri, 01 Jul 2022 04:07:42  Office Staff   SO News

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ನಾಳೆ, ಶುಕ್ರವಾರ (ಜುಲೈ 1 ) ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಎರಡು ದಿನಗಳ ಕಾಲ ಹೆಚ್ಚಿನ ಮಳೆಯಾಗುವುದರಿಂದ, ಮುಂಜಾಗೃತಾ ಕ್ರಮವಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 1   ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ ತಿಳಿಸಿದ್ದಾರೆ


Share: