ಉಡುಪಿ : ಜಿಲ್ಲಾ ರಜತ ಮಹೋತ್ಸವ ವನ್ನು ಅರ್ಥಪೂರ್ಣವಾಗಿ ಆಚರಿಸುವ ಜೊತೆಯಲ್ಲಿ ಯುವ ಜನತೆಯನ್ನು ಸೈನ್ಯಕ್ಕೆ ಸೇರಲು ಅಗ್ನಿಪಥ್ ಯೋಜನೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಉಡುಪಿ ಜಿಲ್ಲೆ ಮತ್ತು ಟೀಮ್ ನೇಶನ್ ಫಸ್ಟ್ ಸಹಯೋಗದಲ್ಲಿ ಆಯೋಜಿಸಿರುವ 75 ಕೀ.ಮೀ. ಮ್ಯಾರಥಾನ್ ಓಟ "ಅಗ್ನಿಪಥ್ ದೌಡ್" ಗೆ ಗುರುವಾರದಂದು ಉಡುಪಿ ಕಿನ್ನಿಮುಲ್ಕಿ ಸ್ವಾಗತ ಗೋಪುರ ಬಳಿ ಉಡುಪಿ ಶಾಸಕ ರಘುಪತಿ ಭಟ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾಧಿಕಾರಿ ಕೂರ್ಮರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ ಮತ್ತಿತರರು ಉಪಸ್ಥಿತರಿದ್ದರು.