ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಉತ್ತರ ಪ್ರದೇಶ: ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ ಹೊಡೆದು 10 ಜನರ ದುರ್ಮರಣ, 7 ಮಂದಿಗೆ ಗಾಯ

ಉತ್ತರ ಪ್ರದೇಶ: ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ ಹೊಡೆದು 10 ಜನರ ದುರ್ಮರಣ, 7 ಮಂದಿಗೆ ಗಾಯ

Fri, 24 Jun 2022 06:05:04  Office Staff   PTI

ಹರಿದ್ವಾರ: ಉತ್ತರ ಪ್ರದೇಶದ ಹರಿದ್ವಾರದಿಂದ 17 ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಪಿಕಪ್ ವ್ಯಾನ್ ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 10 ಜನರು ದುರ್ಮರಣ ಹೊಂದಿದ್ದಾರೆ.
ಗಜ್ ರೌಲಾ ಪ್ರದೇಶದಲ್ಲಿ ಇಂದು ಬೆಳಗ್ಗೆ ಈ ದುರ್ಘಟನೆ ನಡೆದಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  
ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡು ನಂತರ ಈ ಅಪಘಾತ ನಡೆದಿದೆ .ಗಾಯಾಳುಗಳನ್ನು ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.  ಮೃತರನ್ನು ಪೊಲೀಸರು ಇನ್ನೂ ಗುರುತು ಪತ್ತೆ ಹಚ್ಚಬೇಕಾಗಿದೆ.


Share: