ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಉ.ಪ್ರದೇಶ: ನಲ್ಲಿ ನೀರು ಕುಡಿದಿದ್ದಕ್ಕೆ ಹಲ್ಲೆ, ದಲಿತ ವ್ಯಕ್ತಿ ಸಾವು

ಉ.ಪ್ರದೇಶ: ನಲ್ಲಿ ನೀರು ಕುಡಿದಿದ್ದಕ್ಕೆ ಹಲ್ಲೆ, ದಲಿತ ವ್ಯಕ್ತಿ ಸಾವು

Thu, 30 Nov 2023 22:24:43  Office Staff   Vb

ಬದೌನ್: ಸಾರ್ವಜನಿಕ ನಲ್ಲಿಯಲ್ಲಿ ನೀರು ಕುಡಿದಿದ್ದಕ್ಕಾಗಿ ಗುಂಪಿನಿಂದ ಥಳಿತಕ್ಕೊಳಗಾಗಿದ್ದ 24 ವರ್ಷದ ದಲಿತ ಯುವಕ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಕಮಲೇಶ್ ಎಂದು ಗುರುತಿಸಲಾಗಿದೆ. ಬದೌನ್ ಜಿಲ್ಲೆಯ ಉಸಾಹತ್ ಪೊಲೀಸ್ ಠಾಣೆ ವ್ಯಾಪ್ತಿಯ ಸಾತ್ರ ಗ್ರಾಮದಲ್ಲಿ ಸೋಮವಾರ ರಾತ್ರಿ ಈ ಘಟನೆ ವರದಿಯಾಗಿತ್ತು.

ನಲ್ಲಿಯ ನೀರು ಕುಡಿದದ್ದಕ್ಕಾಗಿ, ಸೂರಜ್ ರಾಥೋಡ್ ಹಾಗೂ ಆತನ ಸಹಚರರು ಕಮಲೇಶ್ ಅವರಿಗೆ ಬಡಿಗೆಗಳಿಂದ ಥಳಿಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಕಮಲೇಶ್‌ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಅವರು ಮೃತಪಟ್ಟರು ಎಂದು ಎಎಸ್ಪಿ ಅಮಿತ್ ಕಿಶೋರ್ ಶ್ರೀವಾಸ್ತವ ತಿಳಿಸಿದ್ದಾರೆ.

ಮೃತನ ತಂದೆ ಜಗದೀಶ್ ನೀಡಿರುವ ದೂರಿನ ಆಧಾರದ ಮೇಲೆ ಸೂರಜ್ ರಾಥೋಡ್‌ನನ್ನು ಬಂಧಿಸಿ, ಆತನ ವಿರುದ್ದ ಎಫ್‌ಐಆ‌ರ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.


Share: