ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕರ್ನಾಟಕದ ನೂತನ ಸಿಎಂ, ಡಿಸಿಎಂ ಪ್ರಮಾಣವಚನ ಕಾರ್ಯಕ್ರಮಕ್ಕೆ ಗಣ್ಯಾತೀಗಣ್ಯರಿಗೆ ಆಹ್ವಾನ.

ಕರ್ನಾಟಕದ ನೂತನ ಸಿಎಂ, ಡಿಸಿಎಂ ಪ್ರಮಾಣವಚನ ಕಾರ್ಯಕ್ರಮಕ್ಕೆ ಗಣ್ಯಾತೀಗಣ್ಯರಿಗೆ ಆಹ್ವಾನ.

Sat, 20 May 2023 03:05:49  Office Staff   SO News

ಬೆಂಗಳೂರು : ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಶನಿವಾರ ಮಧ್ಯಾಹ್ನ ಅಧಿಕಾರ ಸ್ವೀಕರಿಸಲಿದ್ದಾರೆ. 

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದೇಶದ ಗಣ್ಯಾತೀಗಣ್ಯರು ಭಾಗವಹಿಸಲಿದ್ದಾರೆ. ಈಗಾಗಲೇ ವಿವಿಧ ರಾಜ್ಯಗಳ ಗಣ್ಯರಿಗೆ ಆಹ್ವಾನ ನೀಡಲಾಗಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, 
ತಮಿಳುನಾಡು ಮುಖ್ಯಮಂತ್ರಿ  ಎಂ ಕೆ ಸ್ಟಾಲಿನ್,   ಜಾರ್ಖಂಡ್ ಮುಖ್ಯಮಂತ್ರಿ 
ಹೇಮಂತ್ ಸೋರೆನ್, ಬಿಹಾರದ ಉಪ ಮುಖ್ಯಮಂತ್ರಿ  ತೇಜಸ್ವಿ ಯಾದವ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ 
ಶರದ್ ಪವಾರ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ,  ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ‌ ಫಾರೂಕ್ ಅಬ್ದುಲ್ಲಾ,   ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಪ್ತಿ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಸೇರಿದಂತೆ ವಿವಿಧ ಗಣ್ಯರಿಗೆ ಆಹ್ವಾನ ನೀಡಲಾಗಿದೆ.
ಮಧ್ಯಾಹ್ಯ 12 - 30ಕ್ಕೆ ರಾಜ್ಯಪಾಲರು ನೂತನ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಪ್ರಮಾಣವಚನ ಬೋಧಿಸಲಿದ್ದಾರೆ.


Share: