ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರದಲ್ಲಿ‌ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ. ಅಭಿವೃದ್ಧಿಯಾಗಲಿದೆ ಮಾಲಾದೇವಿ ಮೈದಾನ.

ಕಾರವಾರದಲ್ಲಿ‌ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ. ಅಭಿವೃದ್ಧಿಯಾಗಲಿದೆ ಮಾಲಾದೇವಿ ಮೈದಾನ.

Sat, 23 Apr 2022 02:15:00  Office Staff   SO News

ಕಾರವಾರ : ನಗರದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಯನ್ನ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಿದರು.

9.80 ಕೋಟಿ ವೆಚ್ಚದಲ್ಲಿ ಸರ್ಕ್ಯೂಟ್ ಹೌಸ್ ಕಟ್ಟಡ,  4 ಕೋಟಿ ರೂ. ವೆಚ್ಚದ ಲೋಕೋಪಯೋಗಿ ಇಲಾಖೆ ಕಚೇರಿ  ಕಟ್ಟಡ ನಿರ್ಮಾಣ ಹಾಗೂ ಐದು ಕೋಟಿ ರೂ. ವೆಚ್ಚದಲ್ಲಿ ಮಾಲಾದೇವಿ ಕ್ರೀಡಾಂಗಣ  ಅಭಿವೃದ್ಧಿ ಹಾಗೂ ಮಾಲದೇವಿ ಮೈದಾನದ ಆವರಣಗೋಡೆ ನಿರ್ಮಾಣ ಕಾಮಗಾರಿ ನಡೆಯಲಿದೆ.

ಸರ್ಕ್ಯೂಟ್‌ ಹೌಸ್‌ ಮೇಲ್ಚಾವಣಿ ಒಂದು‌ ಬದಿಯಲ್ಲಿ  ಕುಸಿದಿದ್ದು, ವಾಸ್ತವ್ಯಕ್ಕೆ ಕಷ್ಟವಾಗುತ್ತಿತ್ತು. ಇದರಿಂದಾಗಿ ಮಾಜಿ‌ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಕಾರಜೋಳ ಅವರ ಸಹಕಾರದಿಂದ ಅನುದಾನ ಸಿಕ್ಕಿದೆ. ಸ್ಥಳೀಯ ವಾತಾವರಣಕ್ಕೆ ಅನುಕೂಲವಾಗುವಂತೆ ಸುಸಜ್ಜಿತ ಕಟ್ಟಡ ಹಾಗೂ ಸುಂದರ ಕೊಠಡಿಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ.

ಮಾಲಾದೇವಿ ಮೈದಾನದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಬೇಕೆಂಬ ಹಲವು ವರ್ಷದ ಬೇಡಿಕೆಯಾಗಿತ್ತು.  ಮೈದಾನದಲ್ಲಿ ಕ್ರೀಡಾಪಟುಗಳು ಹಲವು ಸಮಸ್ಯೆಗಳನ್ನು ಎದುರಿಸಬೇಕಾಗಿತ್ತು. ಕ್ರೀಡಾಪಟುಗಳಿಗೆ ಬಟ್ಟೆಗಳನ್ನು ಬದಲಾಯಿಸುವುದಕ್ಕೂ ಯಾವುದೇ ಸಮರ್ಪಕ ವ್ಯವಸ್ಥೆ ಇರಲಿಲ್ಲ. ಶೌಚಾಲಯ ವ್ಯವಸ್ಥೆ ಇಲ್ಲದೆ ಕ್ರೀಡಾಂಗಣಕ್ಕೆ ಬರುವ ಕ್ರೀಡಾಪಟುಗಳು ಸಮಸ್ಯೆ ಅನುಭವಿಸುತ್ತಿದ್ದರು.

ಕ್ರೀಡಾಪಟುಗಳು ಸಮಸ್ಯೆ ಬಗ್ಗೆ ಹಿಂದಿನ ಸರ್ಕಾರದ ಸಚಿವರಿಗೆ ಜನಪತ್ರಿನಿಧಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಕ್ರಮವಾಗಿರಲಿಲ್ಲ. ಇತಿಹಾಸದಲ್ಲಿ ಮೊದಲ ಬಾರಿಗೆ ಕ್ರೀಡೆಗಳಿಗೆ ಅನುಕೂಲವಾಗುವಂತೆ ಅಗತ್ಯ ಟ್ರ್ಯಾಕ್, ಗ್ಯಾಲರಿ, ಒಳಾಂಗಣ ಕ್ರೀಡಾಂಗಣ, ವಿಶ್ರಾಂತಿ ಕೊಠಡಿ, ಶೌಚಾಲಯ, ಆವರಣ ಗೋಡೆ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳು ಬರಲಿವೆ. ಕ್ರೀಡಾಪಟುಗಳಿಗೆ, ಸಾರ್ವಜನಿಕರಿಗೆ ಅನುಕೂಲವಾಗಬಹುದು. 

ಶಾಸಕಿ ರೂಪಾಲಿ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ಕಾರವಾರಕ್ಕೆ ಅಭಿವೃದ್ಧಿ ಕಾಮಗಾರಿಗಳಿಂದ ಅನುಕೂಲವಾಗಲಿದೆ ಎಂದರು.

 ಕಾರ್ಯಕ್ರಮದಲ್ಲಿ ವಿಧಾನಪರಿಷತ್‌ ಸದಸ್ಯರಾದ  ಗಣಪತಿ ಉಳ್ವೇಕರ,  ಎಸ್. ವಿ. ಸಂಕನೂರ, ನಗರಸಭೆ ಅಧ್ಯಕ್ಷ ನಿತಿನ್ ಪಿಕಳೆ, ಉಪಾಧ್ಯಕ್ಷ ಪ್ರಕಾಶ ನಾಯ್ಕ‌, ಸದಸ್ಯರಾದ ಪ್ರೇಮಾನಂದ ಗುನಗಾ, ಸುಜಾತ ತಾಮ್ಸೆ ಉಪಸ್ಥಿತರಿದ್ದರು.


Share: