ಕಾರವಾರ : ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಏರ್ಪಡಿಸಲಾಗಿದ್ದ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ಎಸ್ ವೈದ್ಯ ಅವರು ಧ್ವಜಾರೋಹಣ ನೆರವೇರಿಸಿದರು.
ಈ ವೇಳೆ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರ್ಯೋತ್ಸವ ಶುಭ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕ ಸತೀಶ ಸೈಲ್, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಮತಿತ್ತರರು ಉಪಸ್ಥಿತರಿದ್ದರು.