ಕಾರವಾರ :ಕರಾವಳಿ ಭಾಗದಲ್ಲಿ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ನಾಳೆ ಶುಕ್ರವಾರ ಶಾಲಾಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಅತ್ಯಧಿಕ ಮಳೆಯಾಗುವ ಸೂಚನೆ ಬಂದಿದೆ. ಹೀಗಾಗಿ ಮುಂಜಾಗ್ರತೆಯಾಗಿ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ಪ್ರದೇಶಗಳ ಶಾಲೆ , ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕನ್ನಡ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅದೇಶ ಹೊರಡಿಸಿದ್ದಾರೆ.