ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾರವಾರ: ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಪ್ರಶಸ್ತಿಗೆ ಅರ್ಜಿ ಆಹ್ವಾನ

Tue, 22 Aug 2023 02:49:50  Office Staff   S O News

ಕಾರವಾರ: ನಾವಿನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ ಹಾಗೂ ಕಲಾ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷ ವಯೋಮಾನದ ಮಕ್ಕಳನ್ನು ಗುರುತಿಸಿ 2023ನೇ ಸಾಲಿನ ಜಿಲ್ಲಾ ಪ್ರಶಸ್ತಿಯನ್ನು ನೀಡಬೇಕಾಗಿರುತ್ತದೆ.

ಜಿಲ್ಲೆಯಲ್ಲಿ  ಮೇಲ್ಕಂಡ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿರುವ 5 ರಿಂದ 18 ವರ್ಷದೋಳಗಿನ ಅಂದರೆ ದಿನಾಂಕ: 01-08-2005 ಹಾಗೂ ನಂತರ ಹುಟ್ಟಿದ ಮಕ್ಕಳನ್ನು 2023ನೇ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಈ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗುವಂತಹ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿರತಕ್ಕದು.

ಅಸಾಧಾರಣವೆಂದು ಇವರ ಸಾಧನೆಯನ್ನು ಸಾಮರ್ಥಿಸಲು ಪೂರಕ ದಾಖಲಾತಿಗಳನ್ನು ಒದಗಿಸುವುದು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢಿಕರಿಸಿ ಸಲ್ಲಿಸಬೇಕು. 

2023 ನೇ ವರ್ಷದ ಪ್ರಶಸ್ತಿಗೆ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಥವಾ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆ.30 ರೊಳಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರವಾರ ಇವರಿಗೆ ಕಳಿಹಿಸಸುಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: