ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಆಹ್ವಾನ

ಕಾರವಾರ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಆಹ್ವಾನ

Sun, 01 May 2022 04:26:07  Office Staff   SO News

ಕಾರವಾರ : ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಉತ್ತರ ಕನ್ನಡ, ಕಾರವಾರದಲ್ಲಿ ಶೀಘ್ರಲಿಪಿಗಾರ ಮತ್ತು ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 ಶೀಘ್ರಲಿಪಿಗಾರ ಹುದ್ದೆಗೆ ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಜವಾನ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ  ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಮೇ.2 ರಿಂದ ಜೂ.1 ರ ವರೆಗೆ ಆನ್‍ಲೈನ್ ಮೂಲಕ ಇಲಾಖಾ ವೆಬ್‍ಸೈಟ್ https://districts.ecourts.gov.in/uttarakannada-onlinerecruitmen  ನಲ್ಲಿ ಸಲ್ಲಿಸಬಹುದು ಎಂದು ಜಿಲ್ಲಾ ನ್ಯಾಯಾಲಯ ಪ್ರಭಾರ ಮುಖ್ಯ ಆಡಳಿತಾಧಿಕಾರಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: