ಭಟ್ಕಳ, ಮಾರ್ಚ್ 4: ಭಟ್ಕಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ಸೊಂದು ಓವರ್ ಟೇಕ್ ಮಾಡುವ ಭರದಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದ ಮೀನು ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್ ನ ಕ್ಲಿನರ್ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯ ಸರ್ಪನಕಟ್ಟೆ ಬಳಿ ರಾ.ಹೆ.17 ರಲ್ಲಿ ಗುರುವಾರ ರಾತ್ರಿ 9-30 ಗಂಟೆಗೆ ಜರುಗಿದೆ. ಮೃತ ವ್ಯಕ್ತಿಯನ್ನು ಶಂಕ್ರಪ್ಪ ಸಿರ್ಸಿ ಎಂದು ಗುರುತಿಸಲಾಗಿದೆ. ಲಾರಿ ಚಾಲಕ ಮುಹಮ್ಮದ್ ರಫೀಖ್ ಎಂಬಾತನಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
ಭಟ್ಕಳದಿಂದ ರಾತ್ರಿ 9 ಗಂಟೆಗೆ ಬೆಂಗಳೂರಿಗೆ ಹೋಗುವ ದುರ್ಗಾಂಬ ಖಾಸಗಿ ಬಸ್ಸು ವೇಗದ ಭರಾಟೆಯಲ್ಲಿ ಸಾಗುತ್ತಿದ್ದಾಗ ಅದೇ ಮಾರ್ಗವಾಗಿ ಹೋಗುತ್ತಿದ್ದ ಮೀನು ಲಾರಿಗೆ ಓವರ್ ಟೇಕ್ ಮಾಡುವಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅದೃಷ್ಟವಶಾತ್ ಬಸ್ಸಿನಲ್ಲಿರುವ ಪ್ರಯಾಣಿಕರಿಗೆ ಯಾವುದೆ ಅನಾಹುತವಾಗಲಿಲ್ಲ. ಪ್ರಕರಣ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದೆ.