ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ: ಅರ್ಜಿ ಅಹ್ವಾನ

ಕಾರವಾರ: ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ: ಅರ್ಜಿ ಅಹ್ವಾನ

Tue, 29 Aug 2023 03:00:09  Office Staff   S O News

ಕಾರವಾರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2023-24 ನೇ ಸಾಲಿಗೆ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ ಎನ್.ಸಿ.ಟಿ.ಇ ಯಿಂದ ಮಾನ್ಯತೆ ಪಡೆದಿರುವ ಹಾಗೂ ಡಿ.ಎಡ್ ಡಿ.ಎಸ್.ಇ.ಆರ್.ಟಿ ಯಿಂದ ಮಾನ್ಯತೆ ಪಡೆದಿರುವ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರೀಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ವಿದ್ಯಾರ್ಥಿಗಳಿಗೆ  ವಿಶೇಷ ಪ್ರೋತ್ಸಾಹ ಧನ ನೀಡಲು ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಅಹ್ವಾನಿಸಲಾಗಿದೆ.

ಆರ್ಥಿಕ ವರ್ಷದ ಅನುದಾನಕ್ಕೆ ಅನುಗುಣವಾಗಿ, ಕೋರ್ಸುಗಳ ಅವಧಿಗೆ ತಕ್ಕಂತೆ ಪ್ರತಿ ವರ್ಷ ರೂ. 25000/-ಗಳ ವಿಶೇಷ ಪ್ರೋತ್ಸಾಹಧನ ಗರಿಷ್ಟ 2 ವರ್ಷ ನೀಡಲಾಗುವುದು. ಅರ್ಜಿಯನ್ನು ಸಲ್ಲಿಸಬಯಸುವ ವಿದ್ಯಾರ್ಥಿಗಳ ಪಾಲಕರ ವಾರ್ಷಿಕ ಆದಾಯ 6 ಲಕ್ಷ ಮೀರಿರಬಾರದು. ಮತ್ತು ವಿದ್ಯಾರ್ಥಿಗಳು ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ 50% ರಷ್ಟು ಅಂಕ ಗಳಿಸಿರಬೇಕು. ಕಡ್ಡಾಯವಾಗಿ ಸೇವಾಸಿಂಧು ವೆಬ್ಸೈಟ್ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ/ ನಲ್ಲಿ ಸೆ.21 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ಅಥವಾ ತಮ್ಮ ತಾಲೂಕಿನ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ, ಅಥವಾ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಕಾರವಾರ ದೂರವಾಣಿ ಸಂಖ್ಯೆ 08382-220336/ ಅಥವಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಹಾಯವಾಣಿ 8277799990 ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ  ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: