ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2021ನೇ ಸಾಲಿನ ಜೀವಮಾನ ಸಾಧನೆ ಹಾಗೂ ಕರ್ನಾಟಕ ರತ್ನ ಪ್ರಶಸ್ತಿಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ಹಿರಿಯ ಕ್ರೀಡಾಪಟುಗಳು, ತರಬೇತುದಾರರು ಜೀವಮಾನ ಸಾಧನೆ ಪ್ರಶಸ್ತಿಗಾಗಿ ಹಾಗೂ ಗ್ರಾಮೀಣ ಪ್ತತಿಭೆಗಳಿಗಾಗಿ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಸೇವಾ ಸಿಂಧು ಆನ್ ಲೈನ್ https://sevasindhu.karnataks.gov.in ಮೂಲಕ ಆಗಸ್ಟ್ 10 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ಅಥವಾ ದೂರವಾಣಿ ಸಂಖ್ಯೆ 9480886551, dysskar@gmail.com ಗೆ ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರವೀಣಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.