ಕಾರವಾರ: ಜಿಲ್ಲೆಯಲ್ಲಿ ಬರ ನಿರ್ವಹಣೆ ಕುರಿತಂತೆ ಸಾರ್ವಜನಿಕರಿಗೆ ಕುಡಿಯವ ನೀರಿನ ವ್ಯವಸ್ಥೆ ಮತ್ತು ಜಾನುವಾರುಗಳಿಗೆ ಮೇವಿನ ವ್ಯವಸ್ಥೆಯಲ್ಲಿ ಯಾವುದೇ ಕೊರತೆಯಾದಲ್ಲಿ ಸಂಬ0ದಪಟ್ಟ ತಾಲೂಕಿನ ತಹಸೀಲ್ದಾರ್‌ಗಳನ್ನೇ ಹೊಣೆಗಾರರನ್ನಾಗಿ ಮಾಡಿ, ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಎಚ್ಚರಿಕೆ ನೀಡಿದರು.
ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಬರ ನಿರ್ವಹಣೆ ಕುರಿತ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯ ಸರ್ಕಾರವು ಬರ ನಿರ್ವಹಣೆಗಾಗಿ ಜಿಲ್ಲೆಗೆ 16.50 ಕೋಟಿ ರೂ ಗಳನ್ನು ಬಿಡುಗಡೆ ಮಾಡಿದ್ದು, ಈ ಮೊತ್ತವನ್ನು ಜಿಲ್ಲಾಧಿಕಾರಿಗಳು ಎಲ್ಲಾ ತಾಲೂಕುಗಳು ತಹಸೀಲ್ದಾರ್ ಗಳಿಗೆ ಬಿಡುಗಡೆ ಮಾಡಿದ್ದಾರೆ. ತಹಸೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ತಲೆದೋರಬಹುದಾದ ಕುಡಿಯುವ ನೀರಿನ ಸಮಸ್ಯೆ ಮತ್ತು ಮೇವಿನ ಸಮಸ್ಯೆ ಕುರಿತಂತೆ ಪರಿಶೀಲಿಸಿ, ಸಾಕಷ್ಟು ಮುಂಚಿತವಾಗಿಯೇ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದ0ತೆ ವ್ಯವಸ್ಥೆ ಮಾಡಬೇಕು, ತಪ್ಪಿದಲ್ಲಿ ಅಂತಹ ತಹಸೀಲ್ದಾರ್ ಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕುಡಿಯುವ ನೀರಿನ ಕೊರತೆಯಾಗದಂತೆ ಜಲಮೂಲಗಳನ್ನು ಗುರುತಿಸಿಟ್ಟುಕೊಂಡು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಮತ್ತು ಖಾಸಗಿ ಬೋರ್‌ವೆಲ್ ಗಳನ್ನು ಬಾಡಿಗೆ ಪಡೆಯವ ಕುರಿತಂತೆ ಸಿದ್ದತೆಗಳನ್ನು ಕೈಗೊಳ್ಳಿ. ಬರ ನಿರ್ವಹಣೆಗಾಗಿ ಹಣದ ಯಾವುದೇ ಕೊರೆತೆಯಿಲ್ಲ, ಶಾಸಕರ ನಿಧಿಯಲ್ಲೂ ಸಹ 2 ಕೋಟಿ ರೂ ಅನುದಾನ ಲಭ್ಯವಿದ್ದು ಅದನ್ನೂ ಸಹ ನೀಡಲಾಗುವುದು ಆದರೆ ಯಾವುದೇ ಸಂದರ್ಭದಲ್ಲೂ ಜಿಲ್ಲೆಯ ಸಾರ್ವಜನಿಕರಿಗೆ ತೊಂದರೆಯಾಗದAತೆ ಎಲ್ಲಾ ಮುನ್ನೆಚ್ಚರಿಕೆ ಮತ್ತು ಸಿದ್ದತೆ ಕೈಗೊಳ್ಳಿ. ಪ್ರತೀ 10 ದಿನಗಳಿಗೊಮ್ಮೆ ತಮ್ಮ ವ್ಯಾಪ್ತಿಯಲ್ಲಿನ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ , ಸಮಸ್ಯೆಗಳ ಪರಿಶೀಲನೆ ಮಾಡಿ, ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.
ಪ್ರೊಟ್ಸ್ ನೊಂದಣಿಯಲ್ಲಿ 100% ಗುರಿ ಸಾಧಿಸುವುದ ಮೂಲಕ ರೈತರಿಗೆ ಬೆಳೆ ಪರಿಹರ ಸಪರ್ಮಕವಾಗಿ ದೊರಕುವಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ಕುಡಿಯುವ ನೀರು ಯೋಜನೆಗಳನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕ ಬಳಕಗೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದರು.
ಜಿಲ್ಲೆಯಲ್ಲಿ ಕಳೆದ ಬಾರಿಗಿಂತ ಪ್ರಸ್ತುತ ಶೇ. 16 ರಷ್ಟು ಮಳೆ ಕೊರತೆಯಾಗಿದ್ದು, 12 ತಾಲೂಕುಗಳು ಬರ ಪೀಡಿತ ಎಂದು ಈಗಾಗಲೇ ಘೋಷಣೆಯಾಗಿದೆ. ಬರ ನಿರ್ವಹಣೆ ಕುರಿತಂತೆ ಕುಡಿಯುವ ನೀರು, ಜಲ ಮೂಲಗಳ ಮೇಲ್ವಿಚಾರಣೆ, ಬೆಳೆ ನಿರ್ವಹಣೆ, ಪರಿಹಾರ ನೀಡಿಕೆ, ಮೇವು ನಿರ್ವಹಣೆ, ಉದ್ಯೋಗ ಪರಿಹಾರ, ಆಹಾರ ಭದ್ರತೆ ಕುರಿತಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ತಾಲೂಕು ಮಟ್ಟದಲ್ಲಿ ಟಾಸ್ಕ್ ಪೋರ್ಸ್ ಸಭೆಗಳನ್ನು ನಡೆಸಿ ಅಗತ್ಯ ಸಿದ್ದತೆ ಕೈಗೊಳ್ಳುವಂತೆ ತಿಳಿಸಿದ್ದು ಬರ ನಿರ್ವಹಣೆಗೆ ಅನುದಾನವನ್ನು ಕೂಡಾ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾeಪೂತ್ೆ, ಉಪ ವಿಭಾಗಾಧಿಕಾರಿ ಕನಿಷ್ಕ ಹಾಗೂ ಎಲ್ಲಾ ತಹಸೀಲ್ದಾರ್ ಗಳು ಉಪಸ್ಥಿತರಿದ್ದರು.