ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾರವಾರ: ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Tue, 22 Aug 2023 02:54:12  Office Staff   S O News

ಕಾರವಾರ: ಜಿಲ್ಲೆಯಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಶಸ್ತಿಗೆ ಆಯ್ಕೆಯಾದ ವ್ಯಕ್ತಿಗಳಿಗೆ ತಲಾ ರೂ.25000 ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಂದ ತಲಾ ರೂ. 1 ಲಕ್ಷಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ಪ್ರಧಾನ ಮಾಡಿ ಗೌರವಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಮತ್ತು ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಸೆ.15 ರೊಳಗಾಗಿ ಸಂಬಂಧಿಸಿದ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರವಾರ ಅಥವಾ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: