ಕಾರವಾರ: ಜಿಲ್ಲೆಯಲ್ಲಿ ಸೆ.25ರ ಅಂತ್ಯಕ್ಕೆ ವಾರ್ಷಿಕ ಮಹಾಸಭೆ ಮುಕ್ತಾಯಗೊಳಿಸಿದ ಸಹಕಾರ ಸಂಘಗಳು, ಸೌಹಾರ್ದ ಸಹಕಾರಿಗಳು 2023-24 ಸಾಲಿನ ಲೆಕ್ಕಪರಿಶೋಧನೆಗಾಗಿ ಲೆಕ್ಕಪರಿಶೋಧಕರನ್ನು ನೇಮಕ ಮಾಡಿಕೊಂಡಿದ್ದು ನೇಮಕಾತಿ ಪತ್ರಗಳನ್ನು ಜಿಲ್ಲಾ ಉಪನಿರ್ದೇಶಕರು ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉ.ಕ ಜಿಲ್ಲೆ ಕಾರವಾರ ಇವರಿಗೆ ಸಲ್ಲಿಸಲು ಈ ಮೂಲಕ ತಿಳಿಸಲಾಗಿದೆ.
ಇದಕ್ಕೆ ತಪ್ಪಿದಲ್ಲಿ ಇಲಾಖೆಯಿಂದ ಲೆಕ್ಕಪರಿಶೋಧಕರನ್ನು ನೇಮಕ ಮಾಡುವ ಬಗ್ಗೆ ಕ್ರಮವಿಡಲಾಗುವುದು ಎಂದು ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.