ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ವಾಹನ ಖರೀದಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ

ಕಾರವಾರ: ವಾಹನ ಖರೀದಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ

Sat, 18 Jun 2022 02:00:33  Office Staff   S O News service

ಕಾರವಾರ :  ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡದ ಅರ್ಹ ಸಿದ್ದಿ ಸಮುದಾಯದವರಿಗೆ ಸರಕು ಸಾಗಾಣಿಕೆ ವಾಹನ ಖರೀದಿಸಲು ಸಹಾಯಧನ ನೀಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು  ಸರ್ಕಾರಿ ಷರತ್ತಿಗೊಳಪಟ್ಟು, ಆಸಕ್ತ ಅರ್ಜಿದಾರರಿಂದ ನಿಗಧಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಅರ್ಹ ಪರಿಶಿಷ್ಟ ಪಂಗಡದ ಸಿದ್ಧಿ ಸಮುದಾಯದವರು ನಿಗಧಿತ ನಮೂನೆಯ ಅರ್ಜಿಯನ್ನು ಸಂಬಂಧ ಪಟ್ಟ ತಾಲೂಕಿನ ಸಹಾಯಕ ನಿರ್ದೇಶಕರು, (ಗ್ರೇಡ್-1/2) ಸಮಾಜ ಕಲ್ಯಾಣ ಇಲಾಖೆ ಅಥವಾ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಾರವಾರ ಇವರಿಂದ ಪಡೆದು ಅರ್ಜಿಯನ್ನು ಭರ್ತಿ ಮಾಡಿ ಸೂಕ್ತ ದಾಖಲಾತಿಯೊಂದಿಗೆ ಜೂ. 27 ರೊಳಗೆ ಸಂಬಂಧ ಪಟ್ಟ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಅಥವಾ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಾರವಾರ ಇಲ್ಲಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08382-226575 ಗೆ ಸಂಪರ್ಕಿಸಿ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 


Share: