ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಸೆ. 29 ಮತ್ತು 30 ರಂದು ಮಕ್ಕಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಕಾರವಾರ: ಸೆ. 29 ಮತ್ತು 30 ರಂದು ಮಕ್ಕಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

Sun, 17 Sep 2023 02:43:35  Office Staff   S O News

ಕಾರವಾರ: ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ ಅವರು ಸೆ. 29 ಮತ್ತು 30 ರಂದು ಉತ್ತರ ಕನ್ನಡ  ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.

ಸೆ.29 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಮಕ್ಕಳ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಜೊತೆಗೆ ಸಭೆ ನಡೆಸಲಿದ್ದಾರೆ. ಬಳಿಕ 11.30 ಗಂಟೆಗೆ ಜಿಲ್ಲೆಯಲ್ಲಿನ ಆಯ್ದ ಶಾಲೆ, ಬಾಲಮಂದಿರಗಳು, ಅಂಗನವಾಡಿ, ವಸತಿ ನಿಲಯಗಳು ಮತ್ತು ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಸೆ.30 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಮಟ್ಟದ ಮಕ್ಕಳ ರಕ್ಷಣಾ ಸಮಿತಿ ಸಭೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 2.30 ಗಂಟೆಗೆ ವೀಕ್ಷಣಾಲಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.


Share: