ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಮತ್ತು ನಗರಸಭೆ, ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆ.15 ರಂದು ಬೆಳಗ್ಗೆ 8:30 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಆವರಣದಿಂದ ಪೊಲೀಸ್ ಕಲ್ಯಾಣ ಮಂಟಪದವರೆಗೆ ಮೆರವಣಿಗೆ ಹಾಗೂ ಬೆಳಗ್ಗೆ 9:30 ಕ್ಕೆ ಪೊಲೀಸ್ ಕಲ್ಯಾಣ ಮಂಟಪ ಕಾಜುಭಾಗದಲ್ಲಿ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಉಸ್ತುವಾರಿ ಸಚಿವರಾದ ಮಾಂಕಾಳ ಎಸ್. ವೈದ್ಯ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಂಸದರಾದ ಅನಂತ ಕುಮಾರ ಹೆಗಡೆ, ಶಾಸಕರಾದ ಆರ್. ವಿ. ದೇಶಪಾಂಡೆ, ಶಿವರಾಮ ಹೆಬ್ಬಾರ್, ದಿನಕರ ಕೆ. ಶೆಟ್ಟಿ, ಸತೀಶ್ ಕೆ. ಸೈಲ್, ಭೀಮಣ್ಣ ಟಿ. ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಎಸ್. ವಿ. ಸಂಕನೂರು, ಶಾಂತಾರಾಮ ಬುಡ್ನ ಸಿದ್ದಿ, ಗಣಪತಿ ಉಳ್ವೆಕರ ಮತ್ತಿತರು ಪಾಲ್ಗೊಳ್ಳಲಿದ್ದಾರೆ.