ಭಟ್ಕಳ: ಕಾರು ಹಾಗೂ ಎಮ್80 ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಹೊಡೆದ ಪರಿಣಾಮವಾಗಿ ದ್ವಿಚಕ್ರವಾಹನ ಸವಾರ ಗಂಭೀರ ಗಾಯಗೊಂಡು ಸಾವನಪ್ಪಿದ ಘಟನೆ ತಾಲೂಕಿನ ಮರವರ್ಗ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಇಲ್ಲಿನ
ಮೂಸಾ ನಗರದ ಇಮಾನ್ ಸಲೀಂ (34) ಎಂದು ಗುರುತಿಸಲಾಗಿದೆ. ಇವರು ಕುಂದಾಪುರದಿಂದ ಭಟ್ಕಳದ ಕಡೆಗೆ ಪ್ರಯಾಣಿಸುತ್ತಿದ್ದರೆ, ಕಾರು ಭಟ್ಕಳದಿಂದ ಕುಂದಾಪುರ ಕಡೆ ಹೊರಟಿತ್ತು ಎಂದು ತಿಳಿದುಬಂದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಟ್ಕಳ ಶಹರ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.