ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕುಮಟಾ: ಜೂ. 25 ರಂದು ರಾಷ್ಟ್ರೀಯ ಲೋಕ ಅದಾಲತ್

ಕುಮಟಾ: ಜೂ. 25 ರಂದು ರಾಷ್ಟ್ರೀಯ ಲೋಕ ಅದಾಲತ್

Sat, 18 Jun 2022 02:05:27  Office Staff   S O News service

ಕಾರವಾರ:  ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕುಮಟಾ ತಾಲೂಕು ಸೇವಾ ಸಮಿತಿ ವತಿಯಿಂದ ಜೂ. 25 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯ, ಬ್ಯಾಂಕಿಂಗ್, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧಿಕರಣ, ಕೌಟುಂಬಿಕ ಹಾಗೂ ಸಿವಿಲ್ ಪ್ರಕರಣಗಳ ಹಾಗೂ ರಾಜಿಯಾಗಬಹುದಾದ ಪ್ರಕರಣಗಳಲ್ಲಿ ಇತ್ಯರ್ಥ ಪಡಿಸಿಕೊಳ್ಳಲು ಜೂ. 25 ರಂದು ಹಮ್ಮಿಕೊಂಡಿರುವ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಭಾಗವಹಿಸಬಹುದು. 

ಹೆಚ್ಚಿನ ಮಾಹಿತಿಗಾಗಿ ಕುಮಟಾ ತಾಲೂಕು ಕಾನೂನು ಸೇವಾ ಸಮಿತಿ ಕಚೇರಿ ಅಥವಾ ದೂರವಾಣಿ ಸಂಖ್ಯೆ 7019368728 ಗೆ ಸಂಪರ್ಕಿಸಬಹುದು ಎಂದು ಕುಮಟಾ ತಾಲೂಕು ಕಾನೂನು ಸೇವಾ ಸಮಿತಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. 
 


Share: