ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕುಮಟಾ : ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಲಕ್ಷಾಂತರ ರೂ. ಹಾನಿ.

ಕುಮಟಾ : ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಲಕ್ಷಾಂತರ ರೂ. ಹಾನಿ.

Wed, 29 Jun 2022 04:02:27  Office Staff   SO News

ಕುಮಟಾ : ಶಾರ್ಟ್ ಸರ್ಕ್ಯೂಟ್ ನಿಂದ  ಮನೆಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಘಟನೆ  ಕುಮಟಾ ತಾಲೂಕಿನ ದಿವಗಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. 

 ಗಜಾನನ ಅಂಬಿಗ ಎಂಬುವವರಿಗೆ ಸೇರಿದ ಮನೆ ಬೆಂಕಿ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿದೆ.  ಮನೆಯಲ್ಲಿದ್ದ ಪೀಠೋಪಕರಣ, ಬಟ್ಟೆ ಬರೆಗಳು ಸೇರಿ ಇತರೆ ವಸ್ತುಗಳು  ನಾಶವಾಗಿದೆ.  ಅಂದಾಜು ನಾಲ್ಕು ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು  ನಾಶವಾಗಿದೆ. 

 ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು  ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಕಂದಾಯ ಅಧಿಕಾರಿ, ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.  ಕುಮಟಾ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Share: