ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಬೆಳ್ತಂಗಡಿ: ತಾಲ್ಲೂಕಿನಾದ್ಯಂತ ಮಳೆ - ಉರುಳಿಬಿದ್ದ ಮರ

ಬೆಳ್ತಂಗಡಿ: ತಾಲ್ಲೂಕಿನಾದ್ಯಂತ ಮಳೆ - ಉರುಳಿಬಿದ್ದ ಮರ

Sat, 03 Oct 2009 02:36:00  Office Staff   S.O. News Service
ಬೆಳ್ತಂಗಡಿ,ಅ.2: ತಾಲೂಕಿನಾದ್ಯಂತ ನಿನ್ನೆ ಆರಂಭವಾದ ಮಳೆ ಇಂದೂ ಮುಂದು ವರಿದಿದ್ದು, ನದಿ, ಹಳ್ಳಗಳು ತುಂಬಿ ಹರಿಯುತ್ತಿವೆ. ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ವ್ಯಾಪಕ ಕೃಷಿ ನಾಶ ಸಂಭವಿಸಿದೆ. 

ಇಂದು ಮಧ್ಯಾಹ್ನ ವೇಳೆಗೆ ಬೆಳ್ತಂಗಡಿ-ಕಿಲ್ಲೂರು ರಸ್ತೆಯಲ್ಲಿ ಭಾರೀ ಗಾತ್ರದ ಮರ ಉರುಳಿಬಿದ್ದು ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಭಾರೀ  ಗಾತ್ರದ ಮರ ಕುಸಿಯುತ್ತಿರುವುದನ್ನು ನೋಡಿ ಬಸ್ ಚಾಲಕ ಬಸ್ಸನ್ನು ತಕ್ಷಣ ನಿಲ್ಲಿಸಿದ ಕಾರಣ ಭಾರೀ ಪ್ರಮಾಣದ ಅನಾಹುತವೊಂದು ತಪ್ಪಿದಂತಾಗಿದೆ. ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೋಳಿಸಲಾಗಿದೆ. ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
 
ಕಕ್ಕಿಂಜೆ ಆಸ್ಪತ್ರೆಯ ಸಮೀಪವಿರುವ ಹೈದರಾಲಿ ಎಂಬವರಿಗೆ ಸೇರಿದ ಅಂಗಡಿ ಕಟ್ಟಡ ಕುಸಿದು ಬಿದ್ದಿದ್ದು, ಸಾವಿರಾರು ರೂಪಾಯಿ ನಷ್ಟ ಸಂಭವಿಸಿದೆ. ಇನ್ನೆರಡು ಅಂಗಡಿಗಳಿಗೆ ಭಾಗಶಃ ಹಾನಿಯಾಗಿದೆ. ಅಳದಂಗಡಿ ಸಮೀಪ ಸೂಳೆಬೆಟ್ಟು ಎಂಬಲ್ಲಿ ನದಿಗೆ ಅಡ್ಡಲಾಗಿ ಹಾಕಲಾಗಿದ್ದ ಎರಡು ಕಾಲ್ಸೇತುವೆಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು, ಕೆಲವು ಮನೆಗಳು ಸಂಪರ್ಕ ಕಳೆದುಕೊಂಡಿವೆ. ಹತ್ತಾರು ಕಿ.ಮೀ. ಸುತ್ತಿ ಬಳಸಿ ಬರುವ ಅನಿವಾರ‍್ಯತೆ ಎದುರಾಗಿದೆ.  ಲಾಯಿಲ ಮಸೀದಿಯ ಸಮೀಪ ಗುಡ್ಡ ಕುಸಿದು ರಸ್ತೆ ಬದಿಗೆ ಬಿದ್ದಿದ್ದು, ಚರಂಡಿ ತುಂಬಿ ನೀರು ರಸ್ತೆಯಲ್ಲಿ ಹರಿಯುತ್ತಿದೆ. ನಾಳ ಸಮೀಪ ರೇಷ್ಮೆ ಕೃಷಿ ಭೂಮಿಗೆ ನೀರು ನುಗ್ಗಿದ ಪರಿಣಾಮ ಭಾರೀ ಪ್ರಮಾಣದ ನಷ್ಟ ಸಂಭವಿಸಿದೆ. ಹಲವೆಡೆ ರಸ್ತೆಗಳು ಹಾಗೂ ಕೃಷಿ ಭೂಮಿಗಳು ಜಲಾವೃತಗೊಂಡಿದ್ದು, ಭಾರೀ ಪ್ರಮಾಣದ ಕೃಷಿ ನಾಶ ಸಂಭವಿಸಿದೆ. 

ಮಳೆಯ ವೇಗ ಹೆಚ್ಚಾಗುತ್ತಾ ಹೋಗುತ್ತಿದ್ದು, ನದಿ, ಹಳ್ಳಗಳು ಅಪಾಯದ ಮಟ್ಟದಲ್ಲಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನ ಮನೆಗಳಿಂದ ಹೊರಬರಲು ಸಾಧ್ಯವಾಗುತ್ತಿಲ್ಲ

Share: