ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕೋವಿಶೀಲ್ಡ್, ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಶಿಬಿರ

ಕೋವಿಶೀಲ್ಡ್, ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಶಿಬಿರ

Fri, 27 Jan 2023 05:09:24  Office Staff   SO News

ಉಡುಪಿ : ಕೋವಿಡ್-19 ನಾಲ್ಕನೇ ಅಲೆಯ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನವರಿ 26 ರಂದು ಸಾರ್ವಜನಿಕರಿಗೆ ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕಾ ಶಿಬಿರವನ್ನು ಆಯೋಜಿಸಲಾಗಿದೆ. 

ಕೋವಿಶೀಲ್ಡ್ ಪ್ರಥಮ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2 ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಹಾಗೂ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರು 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆಯಬಹುದಾಗಿದೆ.

 18 ವರ್ಷ ಮೇಲ್ಪಟ್ಟವರಲ್ಲಿ 2ನೇ ಡೋಸ್ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆ ಪಡೆದು 26 ವಾರ (6 ತಿಂಗಳು) ಪೂರೈಸಿದವರಿಗೆ ಕೋವಿಡ್ ಮುನ್ನೆಚ್ಚರಿಕೆ ಲಸಿಕಾ ಡೋಸ್ (ಬೂಸ್ಟರ್ ಡೋಸ್) ನೀಡಲಾಗುವುದು.

 ಕೋವ್ಯಾಕ್ಸಿನ್ ಲಸಿಕೆ ಸೀಮಿತ ಪ್ರಮಾಣದಲ್ಲಿರುವುದರಿಂದ ಕೊನೆಯ 3 ದಿನಗಳು ಮಾತ್ರ ಲಭ್ಯವಿದ್ದು, ಸಾರ್ವಜನಿಕರು ಹತ್ತಿರದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ, ಲಸಿಕಾಕರಣವನ್ನು ಖಚಿತಪಡಿಸಿಕೊಂಡು, ಲಸಿಕೆಯನ್ನು ನಿಗಧಿಪಡಿಸಿಕೊಂಡು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.


Share: