ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಉಡುಪಿ: ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

ಉಡುಪಿ: ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Mon, 03 May 2010 15:46:00  Office Staff   S.O. News Service

ಉಡುಪಿ: ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

ಉಡುಪಿ: ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನೆಲೆ ಯಲ್ಲಿ ಉಡುಪಿ ಜಿಲ್ಲೆಯ ಸ್ಥಳೀಯಾ ಡಳಿತ ಜನಪ್ರತಿನಿಧಿಗಳ, ಕಾರ್ಯ ಕರ್ತರ ಸಮಾವೇಶ ಗುರುವಾರ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ಸಮಾವೇಶ ಉದ್ಘಾಟಿಸಿ ಮಾತನಾ ಡಿದ ರಾಜ್ಯ ವಿಧಾನ ಪರಿಷತ್‌ನ ವಿಪಕ್ಷ ನಾಯಕಿ ಮೋಟಮ್ಮ, ಕೇಂದ್ರದ ಅನುದಾನದ ಸದುಪಯೋಗಕ್ಕೆ ಗ್ರಾ.ಪಂ.ಗಳಲ್ಲಿ ಹೆಚ್ಚು ಹೆಚ್ಚು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆದ್ದು ಬರುವಂತೆ ನೋಡಿಕೊಳ್ಳಬೇ ಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಇದುವರೆಗೆ ಬಂದ ಮಾಹಿತಿಯಂತೆ ಜಿಲ್ಲೆಯಲ್ಲಿ ಒಟ್ಟು 19 ಸ್ಥಾನಗಳಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಿಸಿದರು.

ಸಭೆಯಲ್ಲಿ ವಿ.ಎಸ್.ಉಗ್ರಪ್ಪ, ಜಯಪ್ರಕಾಶ್ ಹೆಗ್ಡೆ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ನಾಯ್ಡು, ಜಿಲ್ಲಾ ನಾಯಕರಾದ ವಾಸುದೇವ ಯಡಿಯಾಳ್, ಸರಳಾ ಕಾಂಚನ್, ವರೋನಿಕಾ ಕರ್ನೇಲಿಯೊ, ಜಿ.ಪಿ. ಬಸವರಾಜ್, ಶ್ಯಾಮಲಾ ಭಂಡಾರಿ, ಆನಂದಿ, ಸರಸು ಬಂಗೇರ ಮತ್ತಿತರರು ಉಪಸ್ಥಿತರಿದ್ದರು.



Share: