ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಚಾಮರಾಜನಗರ: ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಸಚಿವ ಸೋಮಣ್ಣ ಕಪಾಳಮೋಕ್ಷ

ಚಾಮರಾಜನಗರ: ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಸಚಿವ ಸೋಮಣ್ಣ ಕಪಾಳಮೋಕ್ಷ

Mon, 24 Oct 2022 00:58:31  Office Staff   ANI

ಚಾಮರಾಜನಗರ: ಸಚಿವ ವಿ ಸೋಮಣ್ಣ ಅವರು ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಡೆದಿದೆ.

ಶನಿವಾರ ಹಂಗಳ ಗ್ರಾಮದ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ನಿಗದಿಯಾಗಿತ್ತು. ಮಧ್ಯಾಹ್ನ 3.30ಕ್ಕೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಸಚಿವರು ಸಂಜೆ 6.30ಕ್ಕೆ ಆಗಮಿಸಿದರು. ಈ ವೇಳೆ ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಯಿತು. ಇದೇ ವೇಳೆ ಮಹಿಳೆಯೊಬ್ಬರು ತಮ್ಮ ಸಮಸ್ಯೆ ಹೇಳಿಕೊಳ್ಳಲು ಸಚಿವರ ಬಳಿ ತೆರಳಿದರು. ಸಮಸ್ಯೆ ಹೇಳಿಕೊಳ್ಳಲು ತೆರಳಿದ ಮಹಿಳೆಗೆ ಸೋಮಣ್ಣ ಅವರು ಕಪಾಳಮೋಕ್ಷ ಮಾಡಿದರು. ಘಟನೆಯಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ನಂತರ ಪೊಲೀಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿ ತಿಳಿಗೊಳಿಸಿದರು.

 


Share: