ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಚುನಾವಣಾ ಅಕ್ರಮ ನಡೆಸಿ ಗೆದ್ದ ಆರೋಪ ಎಚ್.ಡಿ.ರೇವಣ್ಣಗೆ ಹೈಕೋರ್ಟ್‌ ಸಮನ್ಸ್

ಚುನಾವಣಾ ಅಕ್ರಮ ನಡೆಸಿ ಗೆದ್ದ ಆರೋಪ ಎಚ್.ಡಿ.ರೇವಣ್ಣಗೆ ಹೈಕೋರ್ಟ್‌ ಸಮನ್ಸ್

Tue, 05 Sep 2023 17:33:44  Office Staff   Vb

ಬೆಂಗಳೂರು: ಚುನಾವಣಾ ಅಕ್ರಮಗಳನ್ನು ನಡೆಸಿ ಶಾಸಕ ಎಚ್.ಡಿ.ರೇವಣ್ಣ ಅವರು ಆಯ್ಕೆಯಾಗಿದ್ದು, ಅವರ ಶಾಸಕ ಸ್ಥಾನವನ್ನು ಅನರ್ಹ ಗೊಳಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ಸಂಬಂಧ ಹೈಕೋರ್ಟ್ ಸಮನ್ಸ್ ಜಾರಿ ಮಾಡಿ ಆದೇಶಿಸಿದೆ.

ಹೊಳೆ ನರಸೀಪುರದ ಪರಾಜಿತ ಅಭ್ಯರ್ಥಿ ಹಾಗೂ ವಕೀಲ ದೇವರಾಜೇ ಗೌಡ ಎಂಬವರು ಸಲ್ಲಿಸಿದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ರೇವಣ್ಣಗೆ ಸಮನ್ಸ್ ಜಾರಿ ಮಾಡಿದೆ.

ಈ ಹಿಂದೆ ಕೂಡ ವಿಚಾರಣೆ ನಡೆಸಿದ್ದ ನ್ಯಾಯಪೀಠ ಸಮನ್ಸ್ ಜಾರಿ ಮಾಡಿತ್ತು.

ಆದರೆ, ಪ್ರತಿವಾದಿ ರೇವಣ್ಣ ಅವರು ಸಮನ್ಸ್ ಸ್ವೀಕರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೊಂದು ಬಾರಿ ಸಮನ್ಸ್ ಜಾರಿ ಮಾಡಿದ ಹೈಕೋರ್ಟ್ ವಿಚಾರಣೆಯನ್ನು ಸೆ.25ಕ್ಕೆ ಮುಂದೂಡಿದೆ.

ಅರ್ಜಿಯಲ್ಲಿನ ಅಂಶಗಳು: ವಕೀಲ ದೇವರಾಜೇಗೌಡ ಅರ್ಜಿ ಸಲ್ಲಿಸಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಚ್‌.ಡಿ. ರೇವಣ್ಣ ಭಾರೀ ಅಕ್ರಮಗಳನ್ನು ಎಸಗಿ ಜಯಗಳಿಸಿದ್ದಾರೆ. ಜೊತೆಗೆ, ಮತ ಗಳಿಕೆಯಲ್ಲಿ 2ನೇ ಸ್ಥಾನದಲ್ಲಿದ್ದ ಶ್ರೇಯಸ್ ಪಟೇಲ್ ಕೂಡ ಮತದಾರರಿಗೆ ಆಮಿಷ ಒಡ್ಡಿದ್ದರು. ಹೀಗಾಗಿ, ಇವರಿಬ್ಬರ ಮತಗಳಿಕೆಯನ್ನು ಅಸಿಂಧು ಗೊಳಿಸ ಬೇಕೆಂದು ಕೋರಿದ್ದಾರೆ.


Share: