ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ” ಕುರಿತು ಸಂವಾದ

ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ” ಕುರಿತು ಸಂವಾದ

Thu, 02 Feb 2023 05:22:04  Office Staff   SO News

ಬೆಂಗಳೂರು : ಬೆಂಗಳೂರು ನಗರ ಜಿಲ್ಲಾಡಳಿತ ವತಿಯಿಂದ ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ  “ಚುನಾವಣಾ ವ್ಯವಸ್ಥೆಯಲ್ಲಿ  ಸುಧಾರಣೆಗಳ  ಅಗತ್ಯತೆ”  ಕುರಿತು   ಸಂವಾದ ಕಾರ್ಯಕ್ರಮವನ್ನು ವಿಧಾನಸಭಾ ಅಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ  ಉದ್ಘಾಟಿಸಿದರು.

ಸಂವಾದ ಕಾರ್ಯಕ್ರಮದಲ್ಲಿ ಕಾನೂನು ವ್ಯಾಸಂಗ ಮಾಡುತ್ತಿರುವ, ಪದವಿ ಶಿಕ್ಷಣ ಪಡೆಯುತ್ತಿರುವ  ವಿದ್ಯಾರ್ಥಿಗಳು,  ಬಾರ್ ಕೌನ್ಸಿಲ್ ಸದಸ್ಯರು, ಪತ್ರಕರ್ತರ ಸಂಘದ ಪ್ರತಿನಿಧಿಗಳು, ಸಂಘ ಸಂಸ್ಥೆಗಳ  ಪದಾಧಿಕಾರಿಗಳು, ಸಂಪನ್ಮೂಲ ವ್ಯಕ್ತಿಗಳು  ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ತೋಟಗಾರಿಕೆ ಸಚಿವ ಮುನಿರತ್ನ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಧಾನಸಭಾ ಕಾರ್ಯದರ್ಶಿ ವಿಶಾಲಾಕ್ಷಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಗಪ್ಪ, ಹಾಗೂ ಇತರರು ಉಪಸ್ಥಿತರಿದ್ದರು.


Share: