ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಟ್ಕಳ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

ಭಟ್ಕಳ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

Mon, 07 Dec 2009 02:45:00  Office Staff   S.O. News Service
ಭಟ್ಕಳ, ಡಿಸೆಂಬರ್ 6: ತೆಂಗಿನ ಮರವೇರಿದ ವ್ಯಕ್ತಿಯೋರ್ವ ಕಾಲು ಜಾರಿ ನೆಲಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಬೆಳ್ನಿಯಲ್ಲಿ ಶನಿವಾರ ಸಂಜೆ ೫.೩೦ ಗಂಟೆಯ ಸುಮಾರಿಗೆ ನಡೆದಿದೆ.

ಮೃತ ವ್ಯಕ್ತಿಯನ್ನು ಹೊನ್ನಯ್ಯ ಹೊನ್ನಯ್ಯ ದೇವಾಡಿಗ ಎಂದು ಗುರುತಿಸಲಾಗಿದ್ದು, ಇಲ್ಲಿಯ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಕುಂದಾಪುರಕ್ಕೆ ಸಾಗಿಸುತ್ತಿರುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share: