ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಜಿಲ್ಲಾ ಮಟ್ಟದ ಯುವ ಅಣಕು ಸಂಸತ್ ಸ್ಪರ್ಧೆ 2022-23.

ಜಿಲ್ಲಾ ಮಟ್ಟದ ಯುವ ಅಣಕು ಸಂಸತ್ ಸ್ಪರ್ಧೆ 2022-23.

Tue, 08 Nov 2022 05:36:38  Office Staff   SO News

ಶಿವಮೊಗ್ಗ :  ಪದವಿಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು, ಸಂಸದೀಯ ವ್ಯವಹಾರಗಳ ಇಲಾಖೆ, ಬೆಂಗಳೂರು, ಉಪನಿರ್ದೇಶಕರು ಪದವಿಪೂರ್ವ ಶಿಕ್ಷಣ ಇಲಾಖೆ ಶಿವಮೊಗ್ಗ, ಜಿಲ್ಲಾ ರಾಜ್ಯಶಾಸ್ತ್ರ ಉಪನ್ಯಾಸಕರ ವೇದಿಕೆ ಹಾಗೂ ಮಹೇಶ್ ಪದವಿಪೂರ್ವ ಕಾಲೇಜು ಗೋಪಾಳ ಶಿವಮೊಗ್ಗ  ಇವರ ಸಂಯುಕ್ತಾಶ್ರಯದಲ್ಲಿ  ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಯುವ ಅಣಕು ಸಂಸತ್ ಸ್ಪರ್ಧೆ ನಡೆಯಿತು.

     ಜಿ.ಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ಮಹೇಶ್ ಪದವಿಪೂರ್ವ ಕಾಲೇಜಿನ ಮುಖ್ಯಸ್ಥರಾದ ಶ್ರೀಹರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ ಬಿ, ಮಹೇಶ್ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಗಣಪತಿ ಎನ್.ಜಿ, ಜಿಲ್ಲಾ ಸರ್ಕಾರಿ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಚಂದ್ರಪ್ಪ ಎಸ್.ಗುಂಡಪಲ್ಲಿ, ಕಾಚಿನಕಟ್ಟೆ ಸ.ಪ.ಪೂ ಕಾಲೇಜಿನ ಪ್ರಾಚಾರ್ಯ ಪಂಡರಿನಾಥ ಎಸ್, ಅನುದಾನಿತ ಪ.ಪೂ ಕಾಲೇಜುಗಳ ಸಂಘದ ಅಧ್ಯಕ್ಷ ಶಶಿಕುಮಾರ್, ಉಪನಿರ್ದೇಶಕರ ಕಚೇರಿಯ ಶಾಖಾಧಿಕಾರಿ ಪ್ರಸನ್ನ ಕೆ, ಶಿವಮೊಗ್ಗ ಜಿಲ್ಲಾ ರಾಜ್ಯಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷ ಮಹೇಶ್ ಎಲ್, ಇತರೆ ಅಧಿಕಾರಿ, ಸಿಬ್ಬಂದಿ ವರ್ಗದವರು ಹಾಜರಿದ್ದರು.

ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿಜೇತರ ಪಟ್ಟಿ : ಜಿಲ್ಲಾ ಮಟ್ಟದ ಯುವ ಅಣಕು ಸಂಸತ್ತಿನಲ್ಲಿ ಪಾಲ್ಗೊಂಡಿದ್ದ ಲಿಖಿತ ಎಸ್, ಕಸ್ತೂರಬಾ ಬಾಲಕಿಯರ ಪದವಿಪೂರ್ವ ಕಾಲೇಜು ಇವರು ಪ್ರಥಮ ಸ್ಥಾನ, ಸ್ಪೂರ್ತಿ.ವಿ.ಹೆಚ್ ಸರ್ಕಾರಿ ಪದವಿಪೂರ್ವ ಕಾಲೇಜು, ಸಾಗರ ಇವರು ದ್ವಿತೀಯ ಮತ್ತು ಬಿ.ಎಂ.ವಿನಯ್ ಆದಿಚುಂಚನಗಿರಿ ಪದವಿಪೂರ್ವ ಕಾಲೇಜು ಶಿವಮೊಗ್ಗ ಇವರು ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಯುವ ಅಣಕು ಸಂಸತ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.


Share: