ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಜುಲೈ 26ರಂದು ಕಾರವಾರ, ಜೋಯಿಡಾ, ಹಳಿಯಾಳ ಮತ್ತು ದಾಂಡೇಲಿ ತಾಲೂಕುಗಳಲ್ಲಿ ರಜೆ ಘೋಷಣೆ

ಜುಲೈ 26ರಂದು ಕಾರವಾರ, ಜೋಯಿಡಾ, ಹಳಿಯಾಳ ಮತ್ತು ದಾಂಡೇಲಿ ತಾಲೂಕುಗಳಲ್ಲಿ ರಜೆ ಘೋಷಣೆ

Wed, 26 Jul 2023 04:41:25  Office Staff   SO News

ಕಾರವಾರ : ಜಿಲ್ಲೆಯ ಕಾರವಾರ, ಜೋಯಿಡಾ, ಹಳಿಯಾಳ ಮತ್ತು ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಆರ್ಭಟ ಮುಂದುವರೆದಿರುವುದರಿಂದ ಜುಲೈ 26ರಂದು ರಜೆ  ಮುಂದುವರಿಸಲಾಗಿದೆ.

ಅಗತ್ಯ ಮುಂಜಾಗ್ರತೆ ವಹಿಸುವ ದೃಷ್ಟಿಯಿಂದ  ಜಿಲ್ಲಾಡಳಿತವು ಈ ನಾಲ್ಕು ತಾಲೂಕಗಳ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ.

 ಇನ್ನುಳಿದ ತಾಲೂಕುಗಳಲ್ಲಿ ಮಳೆ ಪ್ರಮಾಣವನ್ನು ಅವಲೋಕಿಸಿ  ಆಯಾ ತಹಶೀಲ್ದಾರ ರವರಿಗೆ ಶಾಲೆ ಕಾಲೇಜ್ ರಜೆಗಳ ಬಗ್ಗೆ ಅಗತ್ಯ ಕ್ರಮ ವಹಿಸಲು ಅಧಿಕಾರ ನೀಡಲಾಗಿದೆ.


Share: