ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಜೂನ್‌ 25 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜನೆ: ಪ್ರಧಾನ ಜಿಲ್ಲಾ ನ್ಯಾಯಾಧೀಶ ಉಮೇಶ ಎಂ. ಅಡಿಗ

ಜೂನ್‌ 25 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜನೆ: ಪ್ರಧಾನ ಜಿಲ್ಲಾ ನ್ಯಾಯಾಧೀಶ ಉಮೇಶ ಎಂ. ಅಡಿಗ

Fri, 24 Jun 2022 02:24:40  Office Staff   SO News

ಧಾರವಾಡ : ಜಿಲ್ಲೆಯಾದ್ಯಂತ ಇರುವ ಎಲ್ಲಾ ಅಧೀನ ನ್ಯಾಯಾಲಯಗಳಲ್ಲಿ ಜೂನ್ 25 ರಂದು ಬೆಳಿಗ್ಗೆ 10 ರಿಂದ ಮದ್ಯಾಹ್ನ 2 ಗಂಟೆಯವರೆಗೆ ರಾಷ್ಟ್ರೀಯ ಲೋಕ ಅದಾಲತ್‍ನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರು ಆಗಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಉಮೇಶ ಎಂ ಅಡಿಗ ಅವರು ತಿಳಿಸಿದ್ದಾರೆ.

ಲೋಕ ಅದಾಲತ್‍ದಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ, ರಾಜಿ ಆಗಬಹುದಾದ ಎಲ್ಲ  ಪ್ರಕರಣಗಳನ್ನು ಹಾಗೂ ಮೋಟಾರ್ ವಾಹನ ಅಪಘಾತ ಪರಿಹಾರದ  ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ವಿದ್ಯುತ್ ಮಂಡಳಿ ಮುಂತಾದ ಸ್ಥಳೀಯ ಸಂಸ್ಥೆಗಳ ಪರ ಮತ್ತು ವಿರುದ್ಧ ದಾಖಲಾದ ಪ್ರಕರಣಗಳು, ಬ್ಯಾಂಕುಗಳಿಗೆ ಸಂಬಂಧಿಸಿದ ಪ್ರಕರಣಗಳು, ವೈವಾಹಿಕ ಅಥವಾ ಜೀವನಾಂಶ ಪ್ರಕರಣಗಳು, ಕಾನೂನಿನನ್ವಯ ರಾಜೀ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಕಾರ್ಮಿಕ ನಷ್ಟ ಪರಿಹಾರ ಪ್ರಕರಣಗಳು, ಎಲ್ಲ ತರಹದ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.

 ಬ್ಯಾಂಕ್, ಕಾರ್ಮಿಕರು, ನೀರು ಮತ್ತು ವಿದ್ಯುತ್‍ಗೆ ಸಂಬಂಧಿಸಿದ ವ್ಯಾಜ್ಯಪೂರ್ವ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ವಿಶೇಷವಾಗಿ ಕಕ್ಷಿಗಾರರು ಹೆಚ್ಚಿನ ಸಂಖ್ಯೆಯಲ್ಲಿ ಲೋಕ ಅದಾಲತ್‍ನ ಸದುಪಯೋಗಪಡಿಸಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಸೂಚಿಸಿದ್ದಾರೆ ಎಂದು  ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಷ್ಪಲತ ಸಿ.ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: