ಭಟ್ಕಳ, ನವೆಂಬರ್ 11: ಕಾನೂನು ಬಾಹೀರವಾಗಿ ಓಸಿ ದಂಧೆಯಲ್ಲಿ ತೊಡಗಿಕೊಂಡಿದ್ದ ಆರೋಪದ ಮೇರೆಗೆ ಭಟ್ಕಳ ಶಹರ ಠಾಣೆಯ ಪೊಲೀಸರು ವ್ಯಕ್ತಿಯೋರ್ವನನ್ನು ಪುಷ್ಪಾಂಜಲಿ ಕ್ರಾಸ್ ಬಳಿ ಬುಧವಾರ ಸಂಜೆ 5 ಗಂಟೆಯ ಸುಮಾರಿಗೆ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಸದಾನಂದ ತಿಮ್ಮಯ್ಯ ನಾಯ್ಕ ಎಂದು ಗುರುತಿಸಲಾಗಿದ್ದು, ಆತನಿಂದ 3015 ರೂಪಾಯಿಯನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಎಸೈ ಮಂಜುನಾಥ ಗೌಡ ತನಿಖೆಯನ್ನು ಮುಂದುವರೆಸಿದ್ದಾರೆ.