ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಜೂ. 9ರಿಂದ 11ರವರೆಗೆ ಉಡುಪಿಯಲ್ಲಿ ಭಾರಿ ಮಳೆ ಸಾಧ್ಯತೆ: ಸಮುದ್ರಕ್ಕೆ ಇಳಿಯದಂತೆ ಸೂಚನೆ

ಜೂ. 9ರಿಂದ 11ರವರೆಗೆ ಉಡುಪಿಯಲ್ಲಿ ಭಾರಿ ಮಳೆ ಸಾಧ್ಯತೆ: ಸಮುದ್ರಕ್ಕೆ ಇಳಿಯದಂತೆ ಸೂಚನೆ

Thu, 09 Jun 2022 01:36:11  Office Staff   SO News

ಉಡುಪಿ: ಜೂ. 9ರಿಂದ 11ರವರೆಗೆ ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಜೂ. 9 ರಿಂದ 11ರವರೆಗೆ ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಸಂಭವವಿದ್ದು, ಮುಂಜಾಗ್ರತಾ ಕ್ರಮವಾಗಿ ಮೂರು ದಿನಗಳ ಕಾಲ ರೈತರು ಕೃಷಿ ಚಟುವಟಿಕೆಗಳನ್ನು ಮುಂದೂಡುವುದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.


Share: