ಕುಮಟಾ : ಉತ್ತರಕನ್ನಡ ಜೆಡಿಎಸ್ ಜಿಲ್ಲಾಧ್ಯಕ್ಷರ ಕಾರು ಅಪಘಾತವಾದ ಘಟನೆ ಗುರುವಾರ ನಡೆದಿದೆ.
ಕುಮಟಾ ತಾಲೂಕಿನ ಹಿರೇಗುತ್ತಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟ್ಯಾಂಕರ್ ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ
ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ ಸೇರಿ ಮೂವರು ಗಂಭೀರ ಗಾಯಗೊಡಿದ್ದಾರೆ ಕಾರಿನಲ್ಲಿದ್ದ ವಿ ಎಂ ಭಂಡಾರಿ, ಪರಮೇಶ್ವರ ನಾಯ್ಕ ಗಂಭೀರ ಗಾಯಗೊಂಡಿದ್ದಾರೆ.
ಅಂಕೋಲಾ ಕಡೆಯಿಂದ ಹೊನ್ನಾವರ ಕಡೆ ಕಾರು ತೆರಳುತಿತ್ತು. ಮಂಗಳೂರಿನಿಂದ ಹುಬ್ಬಳ್ಳಿ ಕಡೆ ಟ್ಯಾಂಕರ್ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಗಾಯಗೊಂಡವರನ್ನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.