ಕಾರವಾರ : ಉತ್ತರಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂಪಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.
ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರಭುಲಿಂಗ ಅವರು, ಹಟ್ಟಿ ಗೋಲ್ಡ್‌ಮೈನ್ಸ್ ಕಂಪೆನಿಯ ಆಡಳಿತ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಮುಲ್ಲೈ ಮುಹಿಲನ್ ಅವರನ್ನ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಆಯುಕ್ತರಾಗಿ ವರ್ಗಾಯಿಸಲಾಗಿದೆ.
ಮುಲೈ ಮುಹಿಲನ್ ಅವರು 2021 ಫೆಬ್ರವರಿ 7ರಂದು ಉತ್ತರಕನ್ನಡಕ್ಕೆ ಡಿಸಿಯಾಗಿ ಆಗಮಿಸಿದ್ದರು. ಅಲ್ಪ ಕಾಲದಲ್ಲಿ ಅವರು ತಮ್ಮ ಸರಳ ವ್ಯಕ್ತಿತ್ವ ಹಾಗೂ ಉತ್ತಮ ಆಡಳಿತಗಾರರಾಗಿ ಉತ್ತರಕನ್ನಡ ಜಿಲ್ಲೆಯಲ್ಲಿ ಜನಾನುರಾಗಿಯಾಗಿದ್ದರು.