ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ದಕ್ಷಿಣಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅಧಿಕಾರ ಸ್ವೀಕಾರ

ದಕ್ಷಿಣಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅಧಿಕಾರ ಸ್ವೀಕಾರ

Thu, 03 Nov 2022 03:58:32  Office Staff   SO News

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಬುಧವಾರ ಅಧಿಕಾರ ವಹಿಸಿಕೊಂಡರು.

 ಪ್ರಭಾರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ನೂತನ ಜಿಲ್ಲಾಧಿಕಾರಿಯವರನ್ನು ಸ್ವಾಗತಿಸಿ, ಶುಭ ಹಾರೈಸಿದರು.

ರವಿಕುಮಾರ್ ಎಂ.ಆರ್. ಅವರು ಈ ಹಿಂದೆ ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ  ವಿಜ್ಞಾನ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ  ಡಾ.ರಾಜೇಂದ್ರ ಕೆ.ವಿ. ಅವರನ್ನು ಸರ್ಕಾರ ಇತ್ತೀಚೆಗೆ ಮೈಸೂರಿನ ಜಿಲ್ಲಾಧಿಕಾರಿಯಾಗಿ ನಿಯೋಜಿಸಿದೆ.


Share: