ದಾಂಡೇಲಿ: ನಗರದ ಲಕ್ಷ್ಮಿಗುಡಿ ಪ್ರದೇಶದಲ್ಲಿ ಗುರುವಾರ ಮನೆಯೊಂದಕ್ಕೆ ಬೆಂಕಿ ಬಿದ್ದ ಘಟನೆ ನಡೆದಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರಬಹುದೆಂದು ಶಂಕಿಸಲಾಗಿದೆ. ಶಾಹಿನ್ ಖಾನ್ ಎನ್ನುವವರಿಗೆ ಸೇರಿದ ಮನೆ ಇದಾಗಿದೆ.
ಬೆಂಕಿ ಹೊತ್ತಿಕೊಂಡಿದ್ದರಿಂದ ಮನೆಯವರು ಹೊರಗೆ ಓಡಿ ಬಂದು ಕೂಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಮತ್ತು ಪೊಲೀಸರು ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನಿಸಿದ್ದಾರೆ.
ಬೆಂಕಿಯ ಕೆನ್ನಾಲಿಗೆ ಪಕ್ಕದ ಮನೆ ಗಳಿಗೂ ಆವರಿಸಿದ್ದರಿಂದ ಲಕ್ಷಾಂತರ ರೂ ಹಾನಿ ಸಂಭವಿಸಿದೆ. ದಾಂಡೇಲಿ ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ್ ಹಾಗೂ ನಗರಸಭೆ ಉಪಾಧ್ಯಕ್ಷರು ಸೇರಿದಂತೆ ಹಲವರು ಆಗಮಿಸಿ ಪರಿಶೀಲನೆ ನಡೆಸಿದರು.