ಭಟ್ಕಳ: ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ 8 ವರ್ಷ ಕಳೆದಿರುವ ಹಿನ್ನೆಲೆಯಲ್ಲಿ ಭಟ್ಕಳ ಬಿಜೆಪಿ ಯುವ ಮೋರ್ಚಾ ವತಿಯಿಂದ ಮುರುಡೇಶ್ವರದಿಂದ ಭಟ್ಕಳದವರೆಗೆ ಬೈಕ್ ರಾಲಿ ನಡೆಸಲಾಯಿತು.
ಶಾಸಕ ಸುನೀಲ ಬೈಕ್ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಪ್ರಧಾನಮಂತ್ರಿಯಾಗಿ ಕಳೆದ 8 ವರ್ಷಗಳ ಅವಧಿಯಲ್ಲಿ ನರೇಂದ್ರ ಮೋದಿಯವರು ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದಂತೆ ದೇಶ ಸೇವೆ ಮಾಡಿದ್ದಾರೆ. ಉಜ್ವಲ, ಜಲಜೀವನ ಮಿಷನ್, ದೀನದಯಾಳ ಯೋಜನೆ, ಕೃಷಿ ಸಮ್ಮಾನ್ ಯೋಜನೆಗಳನ್ನು ಜಾರಿಗೆ ತಂದು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಕಳೆದ 70 ವರ್ಷಗಳ ಕಾಂಗ್ರೆಸ್ ಅವಧಿಯಲ್ಲಿ ಮಂಜೂರಾದ ಪ್ರತಿ 100 ರುಪಾಯಿಯಲ್ಲಿ ಕೇವಲ 10 ರುಪಾಯಿ ಜನರನ್ನು ತಲುಪುತ್ತಿದ್ದರೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು 100ಕ್ಕೆ 100 ರುಪಾಯಿಯನ್ನು ಜನರಿಗೆ ತಲುಪಿಸುವ ಕೆಲಸವನ್ನು ಮಾಡಿದ್ದಾರೆ. ಪ್ರಧಾನ ಮಂತ್ರಿ ರೋಜಗಾರ ಯೋಜನೆಯಡಿಯಲ್ಲಿಕಳೆದ 4 ವರ್ಷಗಳ ಅವಧಿಯಲ್ಲಿ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರಗಳಿಗೆ 150 ಕೋ.ರು. ಅನುದಾನ ನೀಡಲಾಗಿದ್ದು, ಬಿಜೆಪಿ ಕಾರ್ಯಕರ್ತರು ಪಕ್ಷದ ಸಾಧನೆಗಳನ್ನು ಎದೆ ತಟ್ಟಿಕೊಂಡು ಹೇಳಬಹುದಾಗಿದೆ ಎಂದರು. ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ ನಾಯ್ಕ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಗೋವಿಂದ ನಾಯ್ಕ ಮಾತನಾಡಿದರು. ಭಟ್ಕಳಬಿಜೆಪಿ ಉಸ್ತುವಾರಿ ಪ್ರಶಾಂತ ನಾಯ್ಕ, ಭಟ್ಕಳ ಬಿಜೆಪಿ ಮಂಡಳದ ಅಧ್ಯಕ್ಷ ಸುಬ್ರಾಯ ದೇವಡಿಗ ಪ್ರಧಾನ ಕಾರ್ಯದರ್ಶಿಗಳಾದ ಭಾಸ್ಕರ ದೈಮನೆ, ಮೋಹನ ನಾಯ್ಕ ಸರ್ಪನಕಟ್ಟೆ, ರಾಜೇಶ ನಾಯ್ಕ, ದಿನೇಶ ನಾಯ್ಕ, ಭಟ್ಕಳ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಮಹೇಂದ್ರ ನಾಯ್ಕ, ಉಪಾಧ್ಯಕ್ಷ ಚಂದ್ರು ನಾಯ್ಕ ಮೊದಲಾದವರು ಉಪಸ್ಥಿತರಿದ್ದರು