ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಪಿಎಸ್ಸೆ ನೇಮಕಾತಿ ಅಕ್ರಮ ಪ್ರಕರಣ: 12 ಪೊಲೀಸರ ಅಮಾನತು, 12 ವರ್ಗಾವಣೆ

ಪಿಎಸ್ಸೆ ನೇಮಕಾತಿ ಅಕ್ರಮ ಪ್ರಕರಣ: 12 ಪೊಲೀಸರ ಅಮಾನತು, 12 ವರ್ಗಾವಣೆ

Mon, 09 May 2022 06:03:21  Office Staff   Vb

ಬೆಂಗಳೂರು: ಪಿಎಸ್ಸಿ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದರ ನಡುವೆ ಪೊಲೀಸ್ ನೇಮಕಾತಿ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 12 ಸಿಬ್ಬಂದಿಯನ್ನು ವರ್ಗಾವಣೆಗೊಳಿಸಿದರೆ, ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ, ಇನ್‌ಸ್ಪೆಕ್ಟರ್ ಆನಂದ ಮೇತ್ರೆ ಸೇರಿದಂತೆ 12 ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ವರ್ಗಾವಣೆ ಸಂಬಂಧ ನೇಮಕಾತಿ ವಿಭಾಗದ ಎಡಿಜಿಪಿ ಹಿತೇಂದ್ರ ಆದೇಶ ಹೊರಡಿಸಿದ್ದು, ನೇಮಕಾತಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ 17 ಪೊಲೀಸ್ ಸಿಬ್ಬಂದಿಯಲ್ಲಿ 12 ಮಂದಿಯನ್ನು ಬೇರೆ ಬೇರೆ ಕಡೆ ವರ್ಗಾವಣೆ ಮಾಡಲಾಗಿದೆ.

ಸದ್ಯಕ್ಕೆ ಕಚೇರಿ ಕರ್ತವ್ಯ ನಿರ್ವಹಣೆಗಾಗಿ 5 ಜನರನ್ನು ಉಳಿಸಿಕೊಳ್ಳಲಾಗಿದೆ. ಖಾಲಿ ಇರುವ 12 ಸ್ಥಾನಕ್ಕೆ ಹೊಸಬರು ಬಂದ ಬಳಿಕ ಉಳಿದ ಐವರ ಬದಲಾವಣೆಯಾಗುವ ಸಾಧ್ಯತೆ ಇದೆ ಮೂಲಗಳು ತಿಳಿಸಿವೆ. ಎಂದು

ಅಲ್ಲದೆ, ಪಿಎಸ್ಸಿ ಅಕ್ರಮ ನೇಮಕಾತಿ ಪ್ರಕರಣದ ಬೆನ್ನಲ್ಲೇ ಪೊಲೀಸ್ ನೇಮಕಾತಿ ವಿಭಾಗದಲ್ಲಿ ಭಾರೀ ಬದಲಾವಣೆಯಾಗಿದೆ. ಕೆಲವರ ಕೈವಾಡವಿರುವ ಶಂಕೆ ಇದ್ದು, ಇಲಾಖೆಗೆ ಕೆಟ್ಟ ಹೆಸರು ಬಂದ ಹಿನ್ನೆಲೆಯಲ್ಲಿ ಹಿತೇಂದ್ರ ಇಂತಹದೊಂದು ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಅಮಾನತು: ಪ್ರಕರಣದಲ್ಲಿ ರಾಯಚೂರು ಜಿಲ್ಲೆಯ ಲಿಂಗಸುಗೂರು ಉಪವಿಭಾಗದ ಡಿವೈಎಸ್ಪಿ ಮಲ್ಲಿಕಾರ್ಜುನ್  ಸಾಲಿ, ಬೆರಳಚ್ಚು ವಿಭಾಗದ ಇನ್‌ಸ್ಪೆಕ್ಟರ್ ಆನಂದ್ ಮೇತ್ರೆ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದು, ಇದೀಗ ಅವರನ್ನು ಅಮಾನತುಗೊಳಿಸಲಾಗಿದೆ.

ಅದೇ ರೀತಿ, ಕಲಬುರಗಿ ನಗರದ ಜ್ಞಾನಜ್ಯೋತಿ ಹಾಗೂ ಎಂ.ಎಸ್. ಇರಾಣಿ ಪರೀಕ್ಷಾ ಕೇಂದ್ರಗಳಲ್ಲಿ ಅವು ನಡೆದಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕರ್ತವ್ಯ ನಿರತರಾಗಿದ್ದ ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯಲೋಪ ಆರೋಪದಲ್ಲಿ ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್‌.ರವಿಕುಮಾರ್ ತಿಳಿಸಿದ್ದಾರೆ.

ಪ್ರಮುಖವಾಗಿ ಪಿಎಸೈ ಶೈಲಮ್ಮಾ, ನಝ್ಮಾ  ಸುಲ್ತಾನಾ, ಎಎಸ್ಸೆಗಳಾದ ಶಶಿಕುಮಾರ್, ಲತಾ, ಹೆಡ್ ಕಾನ್‌ಸ್ಟೇಬಲ್‌ಗಳಾದ ಪಾರುಬಾಯಿ, ಜೈ ಭೀಮ್, ಶರಣಬಸಪ್ಪ, ದಾಮೋದರ್, ಕಾನ್‌ಸ್ಟೇಬಲ್‌ಗಳಾದ ಪ್ರದೀಪ್ ಮತ್ತು ರಾಜಶ್ರೀ ಸೇರಿ ಒಟ್ಟು 10 ಜನರನ್ನು ಅಮಾನತುಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.


Share: