ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಪ್ರಶ್ನಿಸುವ ಮನೋಭಾವ ಬೆಳಿಸಿಕೊಳ್ಳಲು ಜಿಲ್ಲಾಧಿಕಾರಿ ಕರೆ

ಪ್ರಶ್ನಿಸುವ ಮನೋಭಾವ ಬೆಳಿಸಿಕೊಳ್ಳಲು ಜಿಲ್ಲಾಧಿಕಾರಿ ಕರೆ

Sat, 01 Oct 2022 03:43:58  Office Staff   SO News

ಕಾರವಾರ : ಸಮಾಜದಲ್ಲಿ ನಡೆಯುತ್ತಿರುವ ತಪ್ಪುಗಳನ್ನು ನೋಡಿಕೊಂಡು  ಸುಮ್ಮನೆ ಕುಳಿತುಕೊಳ್ಳದೆ ಧೈರ್ಯದಿಂದ ಅದನ್ನು ಪ್ರಶ್ನೆಸುವಂತಹ ಮನೋಭಾವನೆ ಬೆಳಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.

ಕಾರವಾರ ತಾಲೂಕಿನ ಶಿವಾಜಿ ವಿದ್ಯಾ ಮಂದಿರ  ಸಂಸ್ಥೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ
 ಘಟಕ, ಮಕ್ಕಳ ವಿಶೇಷ ಪೊಲೀಸ್ ಘಟಕ ಇವರ ಸಯುಕ್ತಾಶ್ರಯದಲ್ಲಿ   ಆಯೋಜಿಸಲಾಗಿದ್ದ "ಅರಳು ಮಲ್ಲಿಗೆ"  ಕಾರ್ಯಕ್ರಮವನ್ನು  ಉದ್ಘಾಟಿಸಿ ಮಾತನಾಡಿದರು.

ಅರಳು ಮಲ್ಲಿಗೆ "   ಕಾರ್ಯಕ್ರಮದ ಮೂಲಕ  "ಬಾಲ್ಯ ವಿವಾಹ ನಿಷೇಧ ಕಾಯ್ದೆ,  ಪೋಕ್ಸೋ ಕಾಯಿದೆ, ಬಾಲ ನ್ಯಾಯ ಕಾಯ್ದೆ"ಕುರಿತು  ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ  ಜಾಗೃತಿ ಮೂಡಿಸುವುದಷ್ಟೆ ಅಲ್ಲದೆ, ಮಕ್ಕಳಿಗೆ ಘನತೆಯ ಬದುಕನ್ನು ಕಟ್ಟಿಕೊಳ್ಳಲು ,ಯಾವುದೇ ಅಪರಾಧ ಕೃತ್ಯಗಳಲ್ಲಿ ಬಾಗಿಯಾಗದೆ ತಮ್ಮ ಜೀವನದ ಗುರಿಯ ಕಡೆಗೆ ಗಮನ ಹರಿಸಿ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬದುಕುವುದು ಹಾಗೂ ಘನತೆಯ ಬದುಕನ್ನು ಕಟ್ಟಿಕೊಳ್ಳಲು ಪೂರಕವಾಗುವಂತ ಮಾಹಿತಿಯನ್ನು ನೀಡುವುದೇ ಈ ಕಾರ್ಯಕ್ರಮದ ಉದ್ದೇಶ ವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಶ್ಯಾಮಲಾ ಸಿ.ಕೆ  ಹೇಳಿದರು.

ಈ ಕಾರ್ಯಕ್ರಮದಲ್ಲಿ   ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಧ್ಯಕ್ಷರು,   ಜಿಲ್ಲ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ  ಪ್ರಿಯಾಂಗಾ ಎಂ. ಪ್ರದಾನ ಹಿರಿಯ ಸಿವಿಲ್ ನ್ಯಾಯಾಧೀಶೆ ರೇಷ್ಮಾ ಜೆ ರೋಡ್ರಗಿಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಶ್ಯಾಮಲಾ ಸಿ.ಕೆ,  ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೋನಲ್ ಐಸಗಳ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


Share: