ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಬಸ್‌ಗಳಲ್ಲಿನ ಕರ್ಕಶ ಹಾರ್ನ್ಗಳನ್ನು ತೆರವುಗೊಳಿಸಿ

ಬಸ್‌ಗಳಲ್ಲಿನ ಕರ್ಕಶ ಹಾರ್ನ್ಗಳನ್ನು ತೆರವುಗೊಳಿಸಿ

Thu, 15 Jun 2023 04:39:21  Office Staff   SO News

ಉಡುಪಿ  : ಜಿಲ್ಲೆಯಾದ್ಯಂತ ಖಾಸಗಿ ಬಸ್ಸುಗಳಲ್ಲಿ ಅಳವಡಿಸಿರುವ ಕರ್ಕಶ ಹಾರ್ನ್ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ದೂರು ಕೇಳಿಬಂದಿದೆ.

 ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಸಾಕಷ್ಟು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಪ್ರಕಟಣೆಯ ಏಳು ದಿನಗಳ ಒಳಗೆ ಬಸ್ಸುಗಳಲ್ಲಿನ ಕರ್ಕಶ ಹಾರ್ನ್ಗಳನ್ನು ತೆರವುಗೊಳಿಸಬೇಕು. ತಪ್ಪಿದ್ದಲ್ಲಿ ಪರವಾನಿಗೆಯನ್ನು ಅಮಾನತುಗೊಳಿಸಿ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: