ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ

ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ

Fri, 02 Sep 2022 17:25:00  Office Staff   SO News

ಕಾರವಾರ  : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದಿನಾಂಕ 1-8-2021 ರಿಂದ 31-7-2022 ರ ಅವಧಿಯಲ್ಲಿ ತಮ್ಮ ಪ್ರಾಣದ ಹಂಗನ್ನು  ತೊರೆದು ಹಾಗೂ  ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ ಅಹ್ವಾನಿಸಲಾಗಿದೆ. 

ಅರ್ಹ 1-8-2004  ಹಾಗೂ ನಂತರ ಜನಿಸಿದ ಮಕ್ಕಳು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಿಗದಿ ಪಡಿಸಿದ ಅರ್ಜಿ ನಮೂನೆ ಪಡೆದು  ಭರ್ತಿ ಮಾಡಿ ಸೆ. 30 ರೊಳಗೆ  ಕಾರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಲ್ಲಿಸಬೇಕು. 

ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ 10,000 ರೂ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


Share: