ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಬೀದಿ ನಾಟಕದ ಮೂಲಕ ಬಾಲ-ಕಿಶೋರ ಕಾರ್ಮಿಕ ಕಾಯ್ದೆ ಅರಿವು

ಬೀದಿ ನಾಟಕದ ಮೂಲಕ ಬಾಲ-ಕಿಶೋರ ಕಾರ್ಮಿಕ ಕಾಯ್ದೆ ಅರಿವು

Fri, 20 Jan 2023 04:08:19  Office Staff   SO News

ಶಿವಮೊಗ್ಗ‌  :  ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯಿಂದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ರ ಕುರಿತು  ಇತ್ತೀಚಿಗೆ ಬೀದಿ ನಾಟಕದ ಮೂಲಕ ಅರಿವು ಮೂಡಿಸಲಾಯಿತು.

      ಬೀದಿ ನಾಟಕಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜಣ್ಣ ಸಂಕಣ್ಣನವರು ಚಾಲನೆ ನೀಡಿದರು.

      ಬೀದಿ ನಾಟಕದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರಾವಸ್ಥೆ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ಕಲಂ 3 ರನ್ವಯ 14 ವರ್ಷದೊಳಗಿನ ಬಾಲಕಾರ್ಮಿಕರನ್ನು ಹಾಗೂ ಕಲಂ 3(ಎ)ರನ್ವಯ ಅಪಾಯಕಾರಿ ಉದ್ದಿಮೆ/ಕೈಗಾರಿಕೆಗಳಲ್ಲಿ 18 ವರ್ಷದೊಳಗಿನ ಕಿಶೋರರರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಅಥವಾ ಕೆಲಸ ಮಾಡಲು ಅವಕಾಶ ಮಾಡಿಕೊಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ನೇಮಿಸಿಕೊಂಡ ಮಾಲೀಕರ ವಿರುದ್ಧ ನ್ಯಾಯಾಲಯವು  ಕನಿಷ್ಠ 20 ಸಾವಿರ ರೂ.ಯಿಂದ ಗರಿಷ್ಠ 50 ಸಾವಿರವರೆಗೆ ದಂಡವನ್ನು ಅಥವಾ 6 ತಿಂಗಳಿನಿಂದ 2ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿರುತ್ತದೆ ಎಂಬ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸಿ ಅರಿವು ಮೂಡಿಸಲಾಯಿತು.

       ಉಪ ಕಾರ್ಮಿಕ ಆಯುಕ್ತ ಸೋಮಣ್ಣ, ಕಾರ್ಮಿಕ ಅಧಿಕಾರಿ ಸೀಬಿರಂಗಯ್ಯ, ಕಾರ್ಮಿಕ ನಿರೀಕ್ಷಕ ಭೀಮೇಶ್ ಹಾಗೂ ಯೋಜನಾ ನಿರ್ದೇಶಕ ರಘುನಾಥ ಹಾಜರಿದ್ದರು.


Share: