ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಬೆಂಗಳೂರು: ಸ್ಫೋಟಕ ಪತ್ತೆ ಮೂವರ ಬಂಧನ

ಬೆಂಗಳೂರು: ಸ್ಫೋಟಕ ಪತ್ತೆ ಮೂವರ ಬಂಧನ

Mon, 31 Jul 2023 16:21:37  Office Staff   Vb

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪದಡಿ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ ಬೆನ್ನಲ್ಲೇ, ನಗರದ ಹಲವೆಡೆ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ಮೂವರು ಆರೋಪಿಗಳನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿರುವುದು ವರದಿಯಾಗಿದೆ.

ಶಂಕರ್, ಕುಮಾರ್ ಹಾಗೂ ಶ್ರೀನಿವಾಸ್ ಎಂಬವರು ಬಂಧಿತ ಆರೋಪಿಗಳಾಗಿದ್ದು, ಹೆಸರಘಟ್ಟದ ಕಲ್ಲುಗುಡ್ಡದಹಳ್ಳಿಯ ಶಂಕರ್ ಹಾಗೂ ದಾಸೇನಹಳ್ಳಿ ಬಳಿಯ ಕುಮಾರ್ ಮನೆಗಳಲ್ಲಿ ಶೋಧ ನಡೆಸಲಾಗಿದ್ದು, ಅನುಮತಿ ಇಲ್ಲದೆ ಮನೆಯಲ್ಲಿ ಇಟ್ಟಿದ್ದ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳನ್ನು ಪತ್ತೆಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡೂವರೆ ಕೆ.ಜಿ. ಸಲ್ಪರ್ ಪೌಡರ್, 250 ಗ್ರಾಂ ಎಕ್ಸ್‌ಪ್ಲೋಸಿವ್ ಜೆಲ್, 45 ಕೆ.ಜಿ. ಪೊಟ್ಯಾಶಿಯಂ ನೈಟ್ರೇಟ್ ವೈಟ್ ಪೌಡರ್ ಹಾಗೂ ಸ್ಫೋಟಕ ಮದ್ದುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದಾಸೇನಹಳ್ಳಿಯ ರಾಘವೇಂದ್ರ ಲೇಔಟ್ ನಲ್ಲಿರುವ ಶ್ರೀನಿವಾಸ್ ಎಂಬವರ ಬಾಡಿಗೆ ಮನೆಯಲ್ಲಿ ಶೋಧ ನಡೆಸಿದ್ದು, 1.860 ಕೆ.ಜಿ. ತೂಕದ 15 ರೆಕ್ಸ್ ಎಕ್ಸ್‌ಪ್ಲೋಸಿವ್ ಜೆಲ್, 1.950 ಗ್ರಾಂ ಕಾರ್ಕೋಲ್ ಪೌಡರ್, 7.850 ಗ್ರಾಂ ಸಲ್ಪರ್ ಪೌಡರ್, 13 ಕೆ.ಜಿ. ಪೊಟ್ಯಾಶಿಯಂ ನೈಟ್ರೇಟ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ವಿಚಾರಣೆ ವೇಳೆ ಆರೋಪಿಗಳು ಕಲ್ಲು ಕ್ವಾರಿಗಾಗಿ ಸಂಗ್ರಹ ಮಾಡಿದ್ದಾಗಿ ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.


Share: