ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸತೀಶ್ ಸೈಲ್, ಇತರ ಆರೋಪಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸತೀಶ್ ಸೈಲ್, ಇತರ ಆರೋಪಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್

Fri, 15 Nov 2024 17:13:23  Office Staff   Vb

ಬೆಂಗಳೂರು : ಬೇಲೇಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದಲ್ಲಿ ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. 

ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದ್ದ 7 ವರ್ಷ ಜೈಲು ಶಿಕ್ಷೆಯನ್ನು ಅಮಾನತಿನಲ್ಲಿಡಲು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಆದೇಶ ನೀಡಿದೆ. ಅಲ್ಲದೆ ದಂಡದ ಮೊತ್ತದಲ್ಲಿ ಶೇ 25ರಷ್ಟು ಕೋರ್ಟ್ ನಲ್ಲಿ ಠೇವಣಿ ಇಡುವಂತೆ ಷರತ್ತು ವಿಧಿಸಿರುವ ಹೈಕೋರ್ಟ್, 6 ವಾರದಲ್ಲಿ ಠೇವಣಿ ಇಡುವಂತೆ ಅಪರಾಧಿಗಳಿಗೆ ಸೂಚಿಸಿ ಶಿಕ್ಷೆ ಅಮಾನತಿನಲ್ಲಿಟ್ಟಿದೆ.


Share: